ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಯಲ್ಲಿ ನಟಿ ಜಯಮಾಲಾ ಅವರು ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.
ಚಿತ್ರರಂಗದಲ್ಲಿ ಅಪಾರ ಅನುಭವ ಹೊಂದಿರುವ ಅವರು ಈಗ ಅಧಿಕಾರ ವಹಿಸಿಕೊಂಡಿದ್ದಾರೆ.
ಮಾಜಿ ಅಧ್ಯಕ್ಷ ನರಸಿಂಹಲು ಅವರು ಅಧಿಕಾರ ಹಸ್ತಾಂತರಿಸಿದ್ದಾರೆ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಟಿ ಜಯಮಾಲಾ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
1970ರ ದಶಕದಿಂದಲೂ ನಟಿಯಾಗಿ ಜಯಮಾಲಾ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಈ ಮೊದಲು ಕೂಡ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದರು. ‘ಚಿತ್ರೋದ್ಯಮದ ಹಿತದೃಷ್ಟಿಯಿಂದ ಹೊಸ ಅಧ್ಯಕ್ಷರು ಬಂದಿದ್ದಾರೆ. ಈ ವರ್ಷ ಒಳ್ಳೊಳ್ಳೆಯ ಕೆಲಸ ಮಾಡಲು ನಮಗೆಲ್ಲ ಸಹಕಾರಿ ನೀಡಿ, ಚಿತ್ರೋದ್ಯಮದ ಅಭಿವೃದ್ಧಿಗಾಗಿ ಕೆಲಸ ಮಾಡಲಿ’ ಎಂದು ನಿರ್ಮಾಪಕ ಕೆ. ಮಂಜು ಅವರು ಹೇಳಿದ್ದಾರೆ.
ದುರ್ಗದ ಜಿ.ಪಿ ಕುಮಾರ್ ಅಧಿಕ ಮತಗಳಿಂದ ಆಯ್ಕೆ-
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಯಲ್ಲಿ ಪ್ರದರ್ಶಕ ವಲಯದಿಂದ ಕಾರ್ಯಕಾರಿ ಸಮಿತಿಗೆ ಕೋಟೆನಾಡಿನ ಜಿ.ಪಿ ಕುಮಾರ್ ಅವರು ಅಧಿಕ ಮತಗಳಿಂದ ಆಯ್ಕೆಯಾಗಿದ್ದಾರೆ.
ಇದೇ ಸಂದರ್ಭದಲ್ಲಿ ಭಾರೀ ಬಹುಮತದಿಂದ ಆಯ್ಕೆ ಮಾಡಿದ ಪ್ರದರ್ಶಕ ವಲಯದ ಸದಸ್ಯರು, ಮಾಜಿ ಅಧ್ಯಕ್ಷರು, ಸ್ನೇಹಿತರು, ಹಿತೈಷಿಗಳಿಗೆ ಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.

