ಚಂದ್ರವಳ್ಳಿ ನ್ಯೂಸ್, ಮೊಳಕಾಲ್ಮೂರು:
ಆರ್ಥಿಕ ಶಿಸ್ತು ಕಾಪಾಡಿಕೊಂಡಿರುವ ಬಜೆಟ್ ಇದಾಗಿದೆ ಎಂದು ಬಿಜೆಪಿ ಮುಖಂಡ ಪ್ರಭಾಕರ ಮ್ಯಾಸನಾಯಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿರುವ 2026 -27 ನೇ ಸಾಲಿನ ಬಜೆಟ್ ನಲ್ಲಿ ಆರ್ಥಿಕ ಶಿಸ್ತನ್ನು ಕಾಪಾಡಿಕೊಂಡಿದ್ದಾರೆ ಎಂದು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಪ್ರಭಾಕರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರೈತರ ಹಾಗೂ ಎಂ ಎಸ್ ಎಂ ಇ ಸೆಕ್ಟರ್ ಗಳಿಗೆ ಹೆಚ್ಚು ಆದ್ಯತೆಯನ್ನು ನೀಡಲಾಗಿದೆ ಇದರಿಂದಾಗಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿ (MSME) ಜತೆಗೆ ಶಿಕ್ಷಣ ಆರೋಗ್ಯ ಕ್ಷೇತ್ರಗಳಿಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ವಿಶೇಷವಾಗಿ ಗೋಡಂಬಿ, ಕೋ ಕೋ ಹಾಗೂ ತೆಂಗು ಬೆಳಗಾರರಿಗೆ ಹೆಚ್ಚಿನ ಸಹಾಯ ಒದಗಿಸಲಾಗಿದೆ.
ಗ್ರಾಮೀಣ ಪ್ರದೇಶದ ರೈತರಿಗೆ ಸುಲಭವಾಗಿ ಸಾಲ ಸೌಲಭ್ಯ ಸಿಗುವಂತೆ ಮಾಡಲಾಗಿದೆ. ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹೆಚ್ಚು ಉತ್ತೇಜನ ನೀಡಿದ್ದು ಅತಿ ಹೆಚ್ಚಿನದಾಗಿ ಡೈರಿಗಳನ್ನ ತೆರೆಯಲು ಅವಕಾಶ ಮಾಡಿಕೊಡಲಾಗಿದ್ದು ದೇಶದ ಅಭಿವೃದ್ಧಿಯ ದೃಷ್ಟಿಯಿಂದ ಜನಪರವಾಗಿರುವಂತ ಬಜೆಟ್ ಇದಾಗಿದೆ ಎಂದು ಪ್ರಭಾಕರ ತಿಳಿಸಿದ್ದಾರೆ.

