ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೇಂದ್ರ ಸರ್ಕಾರದ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಮಂಡಿಸಿದ 2026-27ನೇ ಸಾಲಿನ ಬಜೆಟ್ ಕುರಿತು ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ.
ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ನಲ್ಲಿ ವಿಶೇಷವಾಗಿ ಕರ್ನಾಟಕದ ಕರಾವಳಿಯಲ್ಲಿ ಚಾರಣದ ಯೋಜನೆ ರೂಪಿಸಿರುವುದನ್ನು ಸ್ವಾಗತಿಸುತ್ತೇವೆ. ಅಲ್ಲದೆ ಕರ್ನಾಟಕ ಸೇರಿದಂತೆ ಒಟ್ಟಾರೆ ರಾಷ್ಟ್ರದ ಅಭಿವೃದ್ಧಿಗೆ ಪೂರಕವಾದ ಹಾಗೂ ವಿಜ್ಞಾನ,ತಂತ್ರಜ್ಞಾನ, ಶಿಕ್ಷಣ, ಆರೋಗ್ಯ ಸೇರಿದಂತೆ ಪ್ರವಾಸೋದ್ಯಮ ಹತ್ತು ಹಲವು ಯೋಜನೆಗಳನ್ನು ಘೋಷಿಸಿರುವುದು ಭವಿಷ್ಯದ ಬಾರತದ ಕನಸಾಗಿದೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.
ಕರ್ನಾಟಕದ ಕರಾವಳಿ ಚಾರಣ ಯೋಜನೆಯಿಂದ ಪಶ್ಚಿಮ ಘಟ್ಟದ ಉಳಿವಿನ ಬಗ್ಗೆ ಚರ್ಚೆಗಳು ನಡೆಯಿತ್ತಿರುವ ಈ ಸಂದರ್ಭದಲ್ಲಿ ಅಧ್ಯಯನಕ್ಕೆ ಪರಿಸರ ಆಸಕ್ತರು, ಯುವ ಸಂಶೋಧಕರಿಗೆ ಪೂರಕವಾಗಿದೆ. ಇಂತಹ ಅಭಿವೃದ್ಧಿಶೀಲ ಹಾಗೂ 9 ನೇ ದಾಖಲೆಯ ಬಜೆಟ್ ಮಂಡಿಸಿರುವ, ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರಿಗೆ ಮಾದಾರಶ್ರೀಗಳು ಅಭಿನಂದಿಸಿದ್ದಾರೆ.

