ಶೀಘ್ರ 2 ಸಾವಿರ ಹುದ್ದೆಗಳ ಭರ್ತಿ: ಸಚಿವ ಸುಧಾಕರ್

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳು ಸೇರಿ ಅಂದಾಜು 2 ಸಾವಿರ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡುವುದಾಗಿಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು.

ವಿಟಿಯು ಘಟಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ 186, ಪಾಲಿಟೆಕ್ನಿಕ್‍ನಲ್ಲಿ 941, ಕಾಲೇಜು ಶಿಕ್ಷಣ ಇಲಾಖೆಯಲ್ಲಿ 826, ಯುವಿಸಿಇನಲ್ಲಿ 79 ಸೇರಿದಂತೆ ಅಂದಾಜು 2 ಸಾವಿರ ಹುದ್ದೆಗಳ ಭರ್ತಿ ಮಾಡಲಾಗುವುದು. ಆ ಮೂಲಕ ಉನ್ನತ ಶಿಕ್ಷಣ ಇಲಾಖೆಯಲ್ಲಿರುವ ನೌಕರರ ಕೊರತೆಯನ್ನು ನೀಗಿಸಲಾಗುವುದು ಎಂದರು. ವಿಟಿಯು ಉತ್ತಮ ಕೆಲಸಗಳನ್ನು ಮಾಡುತ್ತಿದೆ. ಇದಕ್ಕಾಗಿ ಏಷ್ಯನ್ ಡೆವಲೆಪ್‍ಮೆಂಟ್ ಬ್ಯಾಂಕ್‍ನಿಂದಾಗಿ ಸೆಂಟರ್ ಆಪ್ ಎಕ್ಸಲೆನ್ಸ್ ಆರಂಭಿಸುತ್ತಿದ್ದೇವೆ. ಇಂದು ಪದವಿ ಪಡೆದ ವಿದ್ಯಾರ್ಥಿಗಳ ಜೀವನ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದರು.

- Advertisement - 

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಸ್. ವಿದ್ಯಾಶಂಕರ್ ಅವರು ಮಾತನಾಡಿವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ತಂತ್ರಜ್ಞಾನ ಅಳವಡಿಕೊಳ್ಳುವಲ್ಲಿ ಮುಂದಿದೆ. ಇದಕ್ಕಾಗಿ ಹಲವು ಕಂಪನಿಗಳ ಜತೆಗೆ ಒಪ್ಪಂದ ಮಾಡಿಕೊಂಡಿದೆ. 83 ಸಾವಿರ ವಿದ್ಯಾರ್ಥಿಗಳು ಇಂಟರ್ನ್ ಶಿಪ್ ತೆಗೆದುಕೊಂಡಿದ್ದಾರೆ.

ವಿದ್ಯಾರ್ಥಿಗಳ ಪ್ರಾಜೆಕ್ಟ್ ಗಳ ಪ್ರದರ್ಶನಕ್ಕಾಗಿ ನಾವು ಈ ತಿಂಗಳು ಓಪನ್ ಡೇ ಮಾಡುತ್ತಿದ್ದೇವೆ. ಉತ್ತಮ ಪ್ಲೇಸ್ ಮೆಂಟ್ ಅನ್ನು ವಿಟಿಯು ನೀಡುತ್ತಿದೆ. 4 ಸಾವಿರ ಇಂಡಸ್ಟ್ರಿ ಜತೆಗೆ ಒಪ್ಪಂದ ಮಾಡಿಕೊಳ್ಳುತ್ತಿದ್ದೇವೆ. ವಿದ್ಯಾರ್ಥಿಗಳ ಸರ್ವೋತಮುಖ ಬೆಳವಣಿಗೆಗೆ ಪೂರಕವಾದ ವಾತಾವರಣ ಸೃಷ್ಟಿ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು.

- Advertisement - 

 

Share This Article
error: Content is protected !!
";