ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ: ಅರ್ಜಿ ಸಲ್ಲಿಕೆ ಅವಧಿ ಫೆ.10 ರವರೆಗೆ ವಿಸ್ತರಣೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಅರ್ಹ ಕ್ರೀಡಾಪಟುಗಳಿಗೆ ನೀಡಲಾಗುವ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಇದೇ ಫೆಬ್ರವರಿ 10ರವರೆಗೆ ವಿಸ್ತರಿಸಲಾಗಿದೆ.

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂದರೆ ಜನವರಿ 1 ರಿಂದ ಡಿಸೆಂಬರ್ 31ರ ಅವಧಿಯಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳು ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

- Advertisement - 

ಈ ಹಿಂದೆ ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನಾಂಕವಾಗಿತ್ತು, ಕ್ರೀಡಾಪಟುಗಳ ಹಿತದೃಷ್ಟಿಯಿಂದ ಈ ಅವಧಿಯನ್ನು 2026ರ ಫೆ.10ರವರೆಗೆ ವಿಸ್ತರಿಸಲಾಗಿದೆ. ಆಸಕ್ತರು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in  ಮೂಲಕ ಆನ್‍ಲೈನ್‍ನಲ್ಲಿ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಚೇತಾ ಎಂ.ನೆಲವಗಿ ತಿಳಿಸಿದ್ದಾರೆ.

- Advertisement - 
Share This Article
error: Content is protected !!
";