ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಂಸತ್ತಿನ ಆವರಣದಲ್ಲಿ ನಡೆದ #NDA ಸಂಸದೀಯ ಪಕ್ಷದ ಸಭೆಯಲ್ಲಿ ಜೆಡಿಎಸ್ ಪಕ್ಷದ ನಾಯಕರು ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಭಾಗವಹಿಸಿದ್ದರು.
ಅಲ್ಲಿ ಸೇರಿದ್ದ ಮೈತ್ರಿಕೂಟದ ಎಲ್ಲಾ ಸಂಸದರು ಭಾರತ-ಅಮೆರಿಕ ನಡುವೆ ಏರ್ಪಟ್ಟ ಐತಿಹಾಸಿಕ ವ್ಯಾಪಾರ ಒಪ್ಪಂದ ಹಾಗೂ ಅದು ಸಾಕಾರಗೊಳ್ಳಲು ಕಾರಣೀಭೂತರಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬಿನ್ ಅವರು, ಅನೇಕ ಹಿರಿಯ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಭಾರತದ ಆರ್ಥಿಕ ಪಾಲುದಾರಿಕೆಗಳನ್ನು ಬಲಪಡಿಸುವ ಮತ್ತು ವಿಕಸಿತ ಭಾರತದ ದೃಷ್ಟಿಕೋನವನ್ನು ಮುನ್ನಡೆಸುವ ನಮ್ಮ ಸಾಮೂಹಿಕ ಬದ್ಧತೆಯನ್ನು ಸಭೆ ಪ್ರತಿಬಿಂಬಿಸಿತು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತಿಳಿಸಿದರು.

