ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಉಕ್ಕು ಸಚಿವಾಲಯದ ಅಧಿಕಾರಿಗಳೊಂದಿಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸಂಸತ್ ಭವನದ ಅವರ ಕಚೇರಿಯಲ್ಲಿ ಭೇಟಿ ಮಾಡಿ ಪ್ರಮುಖ ಅಭಿವೃದ್ಧಿ ಆದ್ಯತೆಗಳ ಕುರಿತು ವಿವರವಾದ ಚರ್ಚೆಗಳನ್ನು ನಡೆಸಿದರು.
ಉಕ್ಕು ಸಚಿವಾಲಯದ ಹೊಸ ಹೂಡಿಕೆಗಳು ಮತ್ತು ಈಗಾಗಲೇ ನಡೆಯುತ್ತಿರುವ ಯೋಜನೆಗಳ ಕುರಿತಾಗಿ ಹಾಗೂ ಉಕ್ಕು ವಲಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಜತೆ ಕುಮಾರಸ್ವಾಮಿ ಅವರು ಸುದೀರ್ಘ ಸಮಾಲೋಚನೆ ನಡೆಸಿದರು.
ರಾಷ್ಟ್ರದ ಸುಸ್ಥಿರ ಬೆಳವಣಿಗೆ ಉತ್ತೇಜಿಸುವ ಮತ್ತು ವಿಕಸಿತ ಭಾರತ-2047 ದೃಷ್ಠಿ ಕೋನವನ್ನು ಮುನ್ನಡೆಸುವ ಭವಿಷ್ಯತ್ತಿನ ಕೇಂದ್ರದ ಆಯವ್ಯಯವನ್ನು ಮಂಡಿಸಿದ್ದಕ್ಕಾಗಿ ಹಣಕಾಸು ಸಚಿವರಿಗೆ ಕುಮಾರಸ್ವಾಮಿ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಇದೇ ಸಂದರ್ಭದಲ್ಲಿ ಸಲ್ಲಿಸಿದರು.

