SC, ST ಸಚಿವರು, ಶಾಸಕರ ಮಹತ್ವ ಸಭೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ವಿಧಾನ ಮಂಡಲಗಳ ವಿಶೇಷ ಅಧಿವೇಶನದ ಹೊತ್ತಲ್ಲಿಯೇ  ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.

ಗೃಹ ಸಚಿವ ಡಾ.ಜಿ. ಪರಮೇಶ್ವರ್ ನೇತೃತ್ವದಲ್ಲಿ SC, ST ಸಚಿವರು, ಶಾಸಕರು ಹಾಗೂ ವಿಧಾನ ಪರಿಷತ್​ ಸದಸ್ಯರ ಸಭೆ ನಡೆಸುವ ಮೂಲಕ ಸುದ್ದಿಯಾಗಿದ್ದಾರೆ.

- Advertisement - 

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಈ ಹಿಂದೆ ನೀಡಿದ್ದ ಸೂಚನೆ ಈ ಮೀಟಿಂಗ್​ ನಡೆದಿದೆ ಎನ್ನಲಾಗಿದ್ದು, ಅಧಿಕಾರ ಹಂಚಿಕೆ ವಿಚಾರ ಚರ್ಚೆ ಮಧ್ಯೆಯೇ ಈ ಸಭೆ ಮಹತ್ವ ಪಡೆದುಕೊಂಡಿದೆ.
ಖಾಸಗಿ ಹೋಟೆಲ್​​ನಲ್ಲಿ ಸಭೆಸಚಿವರಾದ ಪರಮೇಶ್ವರ್
, ಮುನಿಯಪ್ಪ, ಮಹದೇವಪ್ಪ, ಶಿವರಾಜ ತಂಗಡಗಿ, ಮಾಜಿ ಸಚಿವ ಕೆ.ಎನ್.ರಾಜಣ್ಣ ಸೇರಿ 20ಕ್ಕೂ ಹೆಚ್ಚು ಎಸ್‌ಸಿ, ಎಸ್‌ಟಿ ಶಾಸಕರು ಹಾಗೂ ಪರಿಷತ್ ಸದಸ್ಯರು ಸಭೆಯಲ್ಲಿ ಭಾಗಿಯಾಗಿದ್ದಾರೆ.

SCSP-TSP ಅನುದಾನ ಬಳಕೆ ಕುರಿತು ಸಭೆ ಹೆಸರಲ್ಲಿ ಕಾಂಗ್ರೆಸ್​ನ SC, ST ಸಚಿವರು, ಶಾಸಕರು ಒಗ್ಗಟ್ಟಿನ ಶಕ್ತಿ ಪ್ರದರ್ಶನ ಮಾಡಿದ್ದು, SCSP-TSP ಅನುದಾನ ಬೇರೆ ಯೋಜನೆಗಳಿಗೆ ಬಳಸ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಜೆಟ್​ನಲ್ಲಿ SC, ST ಸಮುದಾಯಕ್ಕೆ ವಿಶೇಷ ಕೊಡುಗೆ‌ನೀಡಬೇಕು.

- Advertisement - 

 SCSP-TSP ಹಣ ಯಾವುದಕ್ಕೆ ಮೀಸಲಿದೆಯೋ ಅದಕ್ಕೇ ಬಳಸಬೇಕು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಭೇಟಿಯಾಗುವ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದ್ದು, ದಲಿತ ಸಿಎಂ ಬೇಡಿಕೆ ಕುರಿತಾಗಿ ಸಮುದಾಯದಿಂದ ಹೈಕಮಾಂಡ್ ಮುಂದೆ ಹಕ್ಕು ಮಂಡನೆ ಬಗ್ಗೆಯೂ ಸಮಾಲೋಚನೆ ಈ ವೇಳೆ ನಡೆದಿದೆ ಎನ್ನಲಾಗಿದೆ.
SCSP, TSP ಹಣ ನೀಡದ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಈ ಹಿಂದೆ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ರೋಷಾವೇಶ ಪ್ರದರ್ಶಿಸಿದ್ದರು.

ಎಸ್​ಸಿಎಸ್​ಪಿ, ಟಿಎಸ್​ಪಿಗೆ ಅನುದಾನ ಹಂಚಿಕೆ ಮಾಡದಿರುವುದು ಯಾಕೆ? ಏನು ಅಂದುಕೊಂಡಿದ್ದೀರಿ? SCSP, TSP ಹಣ ಬೇರೆ ಕಡೆ ಬಳಸುತ್ತಿದ್ದೀರಾ? ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಏರುಧ್ವನಿಯಲ್ಲಿಯೇ ಸಚಿವರು ಪ್ರಶ್ನಿಸಿದ್ದು, ಮಹದೇವಪ್ಪ ಅವರ ಆಕ್ರೋಶ ಕಂಡು ಸಂಪುಟ ಸಹೋದ್ಯೋಗಿಗಳು ಕಕ್ಕಾಬಿಕ್ಕಿ ಆದ ಪ್ರಸಂಗ ನಡೆದಿತ್ತು. ಆ ಬೆನ್ನಲ್ಲಿಯೇ ಈಗ ಸಮುದಾಯದ ನಾಯಕರ ಸಭೆ ನಡೆದಿರೋದು ಭಾರೀ ಕುತೂಹಲ ಮೂಡಿಸಿದೆ.

 

Share This Article
error: Content is protected !!
";