ವಕೀಲ ಮೊಹಮ್ಮದ್ ಷಾನವಾಜ್ ಕಾಂಗ್ರೆಸ್ ಸೇರ್ಪಡೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ನಗರದ ಖ್ಯಾತ ವಕೀಲ ಹೆಚ್ ಮೊಹಮ್ಮದ್ ಷಾನವಾಜ್ ಜನತಾದಳ ತೊರೆದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ರವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಜನಸೇವೆಯ ಪ್ರಮಾಣಿಕ ಮನೋಭಾವ ಹೊಂದಿರುವ ಹೆಚ್ ಎಂ ಷಾನವಾಜ್ ಪಕ್ಷ ಸೇರ್ಪಡೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಉಪಯುಕ್ತವಾಗಲಿದ್ದು ಮುಂಬರುವ ನಗರಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಡಿ ಸುಧಾಕರ್ ರವರು ಹೇಳಿದರು.

- Advertisement - 

ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಬಲಶಾಲಿಯಾಗಿದ್ದು ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಎದುರಿಸಲು ಕಾರ್ಯಕರ್ತರು ಸನ್ನದ್ದರಾಗಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಹೆಚ್ ಎಂ  ಷಾನವಾಜ್ ಮಾತನಾಡಿ  ಅಭಿಮಾನಿಗಳ ಹಿತೈಷಿಗಳ ಸಲಹೆಯ ಮೇರೆಗೆ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದೇನೆ ಎಂದರು.

- Advertisement - 

ಎಐಸಿಸಿ ಅಲ್ಪಸಂಖ್ಯಾತ ಘಟಕದ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ ಹಾಗೂ ತೆಲಂಗಾಣ ರಾಜ್ಯದ ಉಸ್ತುವಾರಿ ಹೆಚ್ ಎಂ ಷಕೀಲ್ ನವಾಜ್ ಮಾತನಾಡಿ ಕಾಂಗ್ರೆಸ್ ಪಕ್ಷವು ಸರ್ವಜನರ ಹಿತಕ್ಕಾಗಿ  ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು  ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತು ಜನತಾದಳ ಪಕ್ಷ ತೊರೆದು ಮತ್ತಷ್ಟು ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದರು.

ಪಿ ಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಸಾದತ್ ಉಲ್ಲಾ, ಸೂರ್ಯೋದಯ ಅಜೀಜ್, ತಾಲೂಕ್ ಪಂಚಾಯತ್ ಮಾಜಿ ಸದಸ್ಯ ಎಸ್ ಟಿ ಫಕ್ರುದ್ದೀನ್, ಪಿಎಂ ಸಾಧಿಕ್, ವಕೀಲ ಷಾನವಾಜ್ ಕಾಂಗ್ರೆಸ್ ಸೇರ್ಪಡೆಯಾದರು.

Share This Article
error: Content is protected !!
";