ಸ್ವಾಮಿ ಅಖಂಡಾನಂದರ ಆದರ್ಶ ಸೇವೆ ಯುವ ಜನಾಂಗಕ್ಕೆ ಮಾದರಿ ಆಗಬೇಕು: ಡಾ.ಭೂಮಿಕಾ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಶ್ರೀರಾಮಕೃಷ್ಣ ಪರಮಹಂಸರ ಹದಿನಾರು ಮಂದಿ ನೇರ ಸಂನ್ಯಾಸಿ ಶಿಷ್ಯರಲ್ಲಿ ಒಬ್ಬರಾದ ಸ್ವಾಮಿ ಅಖಂಡಾನಂದರ ಸೇವೆಯ ಆದರ್ಶ ಇಂದಿನ ಯುವಜನತೆಗೆ ಆದರ್ಶಪ್ರಾಯವಾಗ ಬೇಕು  ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸ್ವಯಂಸೇವಕಿ ಡಾ.ಭೂಮಿಕಾ ಸಲಹೆ ನೀಡಿದರು. 

                                 ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಯುವಕ-ಯುವತಿಯರಿಗಾಗಿ ಆಯೋಜಿಸಿದ್ದ ವ್ಯಕ್ತಿತ್ವ ನಿರ್ಮಾಣಕಾರಿ ತರಗತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು “ಸ್ವಾಮಿ ಅಖಂಡಾನಂದರ ಸೇವೆ”ಯ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.   

- Advertisement - 

ಕಾರ್ಯಕ್ರಮದ ಆರಂಭದಲ್ಲಿ ಪ್ರಾರ್ಥನೆ ಮತ್ತು ಭಜನೆಯನ್ನು ಯತೀಶ್ ಎಂ ಸಿದ್ದಾಪುರ ನಡೆಸಿಕೊಟ್ಟರೆ ಪೂಜ್ಯ ಮಾತಾಜೀ ತ್ಯಾಗಮಯೀ ಅವರಿಂದ ದಿವ್ಯತ್ರಯರಿಗೆ ಮಂಗಳಾರತಿ, ಸಂನ್ಯಾಸಿ ಗೀತೆಯ ಗಾಯನ ನಡೆಯಿತು.

              ತರಗತಿಯಲ್ಲಿ ಜಿ ಯಶೋಧಾ ಪ್ರಕಾಶ್, ಸಂತೋಷ್ , ಹೃತಿಕ್,ಸಂಜನಾ, ದಾನೇಶ್ವರಿ, ಪುಷ್ಪಲತಾ , ಮಾನ್ಯ ಸೇರಿದಂತೆ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

- Advertisement - 

 

 

 

 

Share This Article
error: Content is protected !!
";