ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರದ ರೈಲ್ವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ, ಮಾಹಿತಿ ಪ್ರಸಾರ ಖಾತೆ ಸಚಿವರಾದ ಅಶ್ವಿನ್ ವೈಷ್ಣವ್ ಅವರನ್ನು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ನವದೆಹಲಿಯಲ್ಲಿ ಭೇಟಿಯಾಗಿ ಕರ್ನಾಟಕಕ್ಕೆ ಸಂಬಂಧಿಸಿದ ಪ್ರಮುಖ ಅಭಿವೃದ್ಧಿ ವಿಷಯಗಳ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಿದರು.
ಬೆಂಗಳೂರು-ಪುಣೆ ಹೈ-ಸ್ಪೀಡ್ ರೈಲು ಕಾರಿಡಾರ್, ಪ್ರಸ್ತಾವಿತ ಬೆಂಗಳೂರು-ಮುಂಬಯಿ ಹೊಸ ಸಂಪರ್ಕ ಮತ್ತು ರೈಲು ಮಾರ್ಗಗಳಲ್ಲಿ ವನ್ಯಜೀವಿಗಳ ಅಪಘಾತಗಳನ್ನು ತಡೆಗಟ್ಟಲು ರೈಲ್ವೆ ಬೇಲಿ ಮತ್ತು ಬ್ಲಾಕ್ ಕಾರಿಡಾರ್‌ಗಳ ಅನುಷ್ಠಾನದ ಕುರಿತು ವಿವರವಾದ ಮಾತುಕತೆಯನ್ನು ಕುಮಾರಸ್ವಾಮಿ ಅವರು ನಡೆಸಿ ಗಮನ ಸೆಳೆದರು.
ಜತೆಗೆ, ಮಂಡ್ಯ ಲೋಕಸಭೆ ಕ್ಷೇತ್ರವೂ ಸೇರಿದಂತೆ ಕರ್ನಾಟಕದ ಎಲ್ಲಾ ಬಾಕಿ ರೈಲ್ವೆ ಯೋಜನೆಗಳ ಬಗ್ಗೆ ಚರ್ಚಿಸಿದ ಕುಮಾರಸ್ವಾಮಿ, ಮೈಸೂರು-ಬೆಂಗಳೂರು ನಡುವೆ ಸಂಚರಿಸುವ ಒಡೆಯರ್ ಎಕ್ಸ್‌ಪ್ರೆಸ್‌ರಾಮನಗರದಲ್ಲಿ ನಿಲುಗಡೆ ಕೋರಿ ಮನವಿ ಮಾಡಿದರು.
ಸಾರ್ವಜನಿಕರಿಗೆ ಅನುಕೂಲ ಆಗುವಂತೆ ಮಂಡ್ಯ ಜಿಲ್ಲೆಯಲ್ಲಿ ಸುಧಾರಿತ ಆಧಾರ್ ಸೇವೆಗಳು ಮತ್ತು ಮೂಲಸೌಕರ್ಯಗಳನ್ನು ಒದಗಿಸುವ ಬಗ್ಗೆ ಕೂಡ ಮಾನ್ಯ ರೈಲ್ವೆ ಅಗತ್ಯವನ್ನು ಸಹ ಎತ್ತಿ ತೋರಿಸಲಾಯಿತು.
ರಾಜ್ಯದಲ್ಲಿ ರೈಲ್ವೆ ಮೂಲಸೌಕರ್ಯ, ಸಂಪರ್ಕ ಮತ್ತು ಸಾರ್ವಜನಿಕ ಸೇವಾ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಶ್ರೀಯುತರೊಂದಿಗೆ ನಡೆದ ಫ್ರಲಪ್ರದವಾಗಿತ್ತು ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

