ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರ ಅಕ್ರಮ ವಲಸಿಗರ ಪತ್ತೆಹಚ್ಚಲು ವಿಶೇಷ ಕಾರ್ಯಾಚರಣೆ ಆರಂಭಿಸಿದೆ.
ಬಾಂಗ್ಲಾದೇಶ ಮತ್ತು ಇತರ ದೇಶಗಳಿಂದ ಅನಧಿಕೃತವಾಗಿ ನೆಲೆಸಿರುವ ವಿದೇಶಿಯರನ್ನು ಗುರುತಿಸುವುದು ಕಾರ್ಯಾಚರಣೆಯ ಮುಖ್ಯ ಉದ್ದೇಶವಾಗಿದೆ. ರಾಜ್ಯ ಸರ್ಕಾರ ಹೈಕೋರ್ಟ್ ಸೂಚನೆ ನಂತರ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಈ ಕಾರ್ಯಕ್ಕೆ ಮುಂದಾಗಿ ಈಗಾಗಲೇ ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಪರಮೇಶ್ವರ್, ರಾಜ್ಯಾದ್ಯಂತ ಅನಧಿಕೃತವಾಗಿ ವಾಸಿಸುತ್ತಿರುವ ಬಾಂಗ್ಲಾದೇಶಿಗರು ಮತ್ತು ವಿದೇಶಿಯರನ್ನು ಹುಡುಕಲು ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ.
ಈ ಹಿಂದೆ 370 ಜನರನ್ನು ಗಡೀಪಾರು ಮಾಡಲಾಗಿತ್ತು ಎಂದು ಸದನದಲ್ಲಿ ಉತ್ತರ ನೀಡಿದ್ದನ್ನೂ ಈ ವೇಳೆ ಅವರು ಉಲ್ಲೇಖಿಸಿದರು.
ಎಫ್ಆರ್ಒ (ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ) ದಾಖಲೆಗಳಲ್ಲಿ ಇಷ್ಟು ದೊಡ್ಡ ಸಂಖ್ಯೆಯ ಅನಧಿಕೃತ ವಲಸಿಗರು ಕಾಣಸಿಗದಿರುವುದರಿಂದ ಸರ್ಕಾರವು ಈ ವಿಶೇಷ ಡ್ರೈವ್ ಮೂಲಕ ಅವರನ್ನು ಪತ್ತೆಹಚ್ಚಲು ಮುಂದಾಗಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

