ಮತಪತ್ರಗಳ ಮೂಲಕ ಸ್ಥಳೀಯ ಸಂಸ್ಥೆಗಳ ಚುನಾವಣೆ-ಸಿದ್ದರಾಮಯ್ಯ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸ್ಥಳೀಯ ಪ್ರಾಧಿಕಾರಗಳ ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಗೌಪ್ಯತೆಯನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಹಿಂದಿನಂತೆ ಮತಪತ್ರಗಳ ಮೂಲಕ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗ್ರೇಟರ್‌ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಮತಪತ್ರ ಬಳಸಿ ಚುನಾವಣೆ ನಡೆಸಲು ಈಗಾಗಲೇ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದೀಗ ಗ್ರಾಮೀಣ ಸೇರಿದಂತೆ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಅದೇ ಮಾದರಿ ಅನುಸರಿಸಲು ಕಾಯ್ದೆಗೆ ತಿದ್ದುಪಡಿ ತಂದು, ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬದಲು ಮತಪತ್ರಗಳ (ಬ್ಯಾಲೆಟ್‌ಪೇಪರ್‌) ಮೂಲಕವೇ ಚುನಾವಣೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

- Advertisement - 

 

- Advertisement - 
Share This Article
error: Content is protected !!
";