ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೋಲಾರದಲ್ಲಿ ಜೆಡಿಎಸ್ ಪಕ್ಷದ ನಾಯಕರು, ವಿಧಾನ ಪರಿಷತ್ ಸದಸ್ಯರಾದ ಇಂಚರ ಗೋವಿಂದರಾಜು ಅವರು ಏರ್ಪಡಿಸಿದ್ದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಭಾಗಿಯಾಗಿ ಆ ಕಲಿಯುಗ ವೈಕುಂಠವಾಸನ ದಿವ್ಯ ದರ್ಶನ ಪಡೆದರು.
ಎಲ್ಲರಿಗೂ ಒಳ್ಳೆಯದಾಗಲಿ ಎಂದು ಕುಮಾರಸ್ವಾಮಿ ಅವರು ದೇವರಲ್ಲಿ ಅರಿಕೆ ಮಾಡಿಕೊಂಡರು.
ಈ ಸಂದರ್ಭದಲ್ಲಿ ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ, ಸಂಸದ ಮಲ್ಲೇಶ್ ಬಾಬು, ಶಾಸಕರಾದ ಜಿ.ಕೆ. ವೆಂಕಟಶಿವಾರೆಡ್ಡಿ, ಸಮೃದ್ಧಿ ಮಂಜುನಾಥ್, ಮೇಲೂರು ರವಿ, ಜಿಲ್ಲೆಯ ಹಿರಿಯ ನಾಯಕರು ಹಾಗೂ ಅಸಂಖ್ಯಾತ ಭಕ್ತರು ಹಾಜರಿದ್ದು ಭಗವಂತನ ಕೃಪೆಗೆ ಪಾತ್ರರಾದರು.

