ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಚುನಾವಣೆಗೆ ಸಿದ್ಧತೆಗೆ ಸಂಬಂಧಿಸಿದಂತೆ ಶನಿವಾರ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ, ಸಂಸದೀಯ ಮಂಡಳಿ ಸದಸ್ಯರು, ಹಿರಿಯ ನಾಯಕರಾದ ಬಿ.ಎಸ್ ಯಡಿಯೂರಪ್ಪ, ಜಿಬಿಎ ಚುನಾವಣಾ ಉಸ್ತುವಾರಿ ರಾಮ್ ದೇವ್,
ಸಹ ಉಸ್ತುವಾರಿ ಡಾ.ಸತೀಶ್ ಪೂನಿಯಾ, ಸಂಜಯ್ ಉಪಾಧ್ಯಾಯ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಮಹತ್ವದ ಸಮಾಲೋಚನಾ ಸಭೆ ನಡೆಸಲಾಯಿತು.
ಸಭೆಯಲ್ಲಿ ಬೆಂಗಳೂರಿನ ಸಂಸದರು, ಶಾಸಕರು, ಮಾಜಿ ಕಾರ್ಪೊರೇಟರ್ ಗಳು, ಪಕ್ಷದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

