ಹೈಡ್ರೋಪೋನಿಕ್ ಗಾಂಜಾ ವಶ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ದೇವನಹಳ್ಳಿ:
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ವಿಶೇಷ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಅಧಿಕಾರಿಗಳು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

ಹೈಡ್ರೋ ಗಾಂಜಾ ಪತ್ತೆ:
ಥಾಯ್ಲೆಂಡ್​ನ ಪುಕೆಟ್​ ಹಾಗೂ ಮಲೇಶಿಯಾದಿಂದ ಕೆಐಎಬಿಗೆ ಆಗಮಿಸಿದ್ದ ಮೂವರು ಪ್ರಯಾಣಿಕರ ಲಗೇಜ್ ಬ್ಯಾಗ್‌ಗಳನ್ನು ಇಮಿಗ್ರೇಷನ್​ ವಿಭಾಗದಲ್ಲಿ ಪರಿಶೀಲಿಸಿದಾಗ
, ಪ್ಯಾಕೆಟ್‌ಗಳಾಗಿ ಅಡಗಿಸಿಟ್ಟಿದ್ದ ಒಟ್ಟು 8.5 ಕೆ.ಜಿ ಹೈಡ್ರೋಪೋನಿಕ್​ ಗಾಂಜಾ ಪತ್ತೆಯಾಗಿದೆ.

- Advertisement - 

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಮಾದಕವಸ್ತು ಜಾಲ ಬಯಲಾಗಿದ್ದು, 53,03,000 ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಗಾಂಜಾ
ಪೂರೈಕೆ ಮಾಡುತ್ತಿದ್ದ ಒಡಿಶಾದ ವ್ಯಕ್ತಿಯೊಂದಿಗೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪುತ್ತೂರು ಗ್ರಾಮಾಂತರ ಪೊಲೀಸರು, ಆರೋಪಿಗಳಿಗೆ ಹಣ ಹಾಗೂ ವಾಹನದ ವ್ಯವಸ್ಥೆ ಮಾಡಿದ್ಧ ಬೆಳ್ತಂಗಡಿಯ ಚಾರ್ಮಾಡಿ ನಿವಾಸಿ ಮಹಮ್ಮದ್​ ಫಯಾಜ್ ಡಿ.ಕೆ (27) ಹಾಗೂ ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ (42) ಎಂಬವರನ್ನು ಬಂಧಿಸಿದ್ದಾರೆ.
ಆರೋಪಿಗಳಿಗೆ ಗಾಂಜಾ ಪೂರೈಸುತ್ತಿದ್ದ ಒಡಿಶಾದ ದೀಪಕ್ ಪಾತ್ರ (37) ಎಂಬಾತನನ್ನು ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಮೋದ್ ಕುಮಾರ್ ನೇತೃತ್ವದ ತನಿಖಾ ತಂಡ ಒಡಿಶಾಕ್ಕೆ ತೆರಳಿ ಬಂಧಿಸಿದೆ. ಈ ವೇಳೆ ಆತನಿಂದ
80,000 ಮೌಲ್ಯದ 1 ಕೆ.ಜಿ 788 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.

- Advertisement - 

ಈ ಕಾರ್ಯಾಚರಣೆಯಲ್ಲಿ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಮೋದ್ ಕುಮಾರ್, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಗುಣಪಾಲ ಜೆ. ಹಾಗೂ ಸಿಬ್ಬಂದಿಗಳಾದ ದೇವರಾಜ್, ಹರ್ಷಿತ್, ಪ್ರಶಾಂತ್, ಅದ್ರಾಮ, ಪ್ರಶಾಂತ್ ರೈ, ಪ್ರವೀಣ್ ರೈ, ಸುಬ್ರಮಣಿ, ಭೀಮಸೇನ್, ಸುರೇಶ್ ಮತ್ತು ದಿವ್ಯಪ್ರಕಾಶ್ ಅವರಿದ್ದ ತಂಡ ಭಾಗವಹಿಸಿತ್ತು.

 

Share This Article
error: Content is protected !!
";