ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಇದೇ ಫೆ.10ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 11.30ಕ್ಕೆ ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 12ಕ್ಕೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಬ್ರಹ್ಮವಿದ್ಯಾನಗರದ ಹೆಲಿಪ್ಯಾಡ್‍ಗೆ ಆಗಮಿಸಿ,
ಡಾ. ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳವರ 27ನೇ ವರ್ಷದ ಪಟ್ಟಾಭಿಷೇಕ ಮಹೋತ್ಸವ ಹಾಗೂ ಶ್ರೀ ಭಗೀರಥ ಜಯಂತ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 3.30ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಎನ್.ರಾಜಪ್ಪ ತಿಳಿಸಿದ್ದಾರೆ.

