ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ಎಲ್ಲಾ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮಾನ್ಯತೆ ನವೀಕರಣಕ್ಕೆ ಇದೇ ಫೆಬ್ರವರಿ 16ರ ವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಪ್ರತಿ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳನ್ನು ನಡೆಸಲು ಸಕ್ಷಮ ಪ್ರಾಧಿಕಾರದಿಂದ ಮಾನ್ಯತೆ ಪಡೆಯುವುದು ಕಡ್ಡಾಯವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಮಾನ್ಯತೆ ನವೀಕರಿಸಲು 2026ರ ಫೆಬ್ರವರಿ 16 ರವರೆಗೆ ಅವಧಿ ವಿಸ್ತರಿಸಿ ಆದೇಶಿಸಿದ್ದಾರೆ.
ಚಿತ್ರದುರ್ಗ ತಾಲ್ಲೂಕಿನ ಅರ್ಹ ಶಾಲಾ ಆಡಳಿತ ಮಂಡಳಿಗಳು ನಿಗದಿತ ದಿನಾಂಕದೊಳಗೆ ಅಗತ್ಯ ದಾಖಲೆಗಳೊಂದಿಗೆ ಆನ್‍ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

