ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಇಂದಿನ ವೇಗದ ಡಿಜಿಟಲ್ ಯುಗದಲ್ಲಿ ಹೆಚ್ಚುತ್ತಿರುವ ಸೈಬರ್ ವಂಚನೆ ತಡೆಗಟ್ಟಲು ಹಾಗೂ ಕೃತಕ ಬುದ್ಧಿಮತ್ತೆಯ (AI) ಸದ್ಬಳಕೆ ಕುರಿತು ಜಾಗೃತಿ ಮೂಡಿಸಲು ಇದೇ ಫೆಬ್ರವರಿ 10ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ “ಅಂತರ್ಜಾಲ ಸುರಕ್ಷತಾ ದಿನದ ಕಾರ್ಯಾಗಾರ” ಹಮ್ಮಿಕೊಳ್ಳಲಾಗಿದೆ.
ಗ್ರಾಮೀಣ ಭಾಗಗಳಲ್ಲಿ ಇಂಟರ್ನೆಟ್ ಬಳಕೆದಾರರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಇ-ಸೇವೆ ಹಾಗೂ ಡಿಜಿಟಲ್ ಪಾವತಿಗಳು ಹೆಚ್ಚಾದಂತೆ ಸೈಬರ್ ಬೆದರಿಕೆಗಳೂ ಅಪಾರವಾಗಿ ಬೆಳೆದಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ, ವಿಶೇಷವಾಗಿ ಮಹಿಳೆಯರು, ಮಕ್ಕಳು ಮತ್ತು ಯುವಜನರಲ್ಲಿ ಸುರಕ್ಷಿತ ಇಂಟರ್ನೆಟ್ ಬಳಕೆಯ ಬಗ್ಗೆ ಅರಿವು ಮೂಡಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ತಿಳಿಸಿದ್ದಾರೆ.

