ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿಯ (ದಿಶಾ) ಪ್ರಗತಿ ಪರಿಶೀಲನಾ ಸಭೆಯನ್ನು ಇದೇ ಫೆಬ್ರವರಿ 21ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಚಿತ್ರದುರ್ಗ ಲೋಕಸಭಾ ಸದಸ್ಯ ಗೋವಿಂದ ಎಂ ಕಾರಜೋಳ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ತಿಳಿಸಿದ್ದಾರೆ.

