ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2026-2027ನೇ ಸಾಲಿನ ಕೇಂದ್ರದ ಆಯವ್ಯಯದ ಬಗ್ಗೆ ಮೈಸೂರಿನಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಮಾತನಾಡಿದರು.
2047ಕ್ಕೆ ವಿಕಸಿತ ಭಾರತ ಸಾಕಾರ ಮಾಡಲೇಬೇಕು ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ದೃಢ ಸಂಕಲ್ಪಕ್ಕೆ ಬುನಾದಿಯಾಗಿ ಈ ಬಜೆಟ್ ರೂಪುಗೊಂಡಿದೆ ಎಂದು ಕುಮಾರಸ್ವಾಮಿ ತಿಳಿಸಿದರು.
ದೂರದೃಷ್ಟಿ, ಕ್ಷಮತೆ, ದಕ್ಷತೆ ಹಾಗೂ ಅಭಿವೃದ್ಧಿಯ ಅಂಶಗಳನ್ನು ಮುಂಗಡಪತ್ರ ಒಳಗೊಂಡಿದೆ. ಕರ್ನಾಟಕಕ್ಕೆ ಅನೇಕ ರೀತಿಯಲ್ಲಿ ದೊಡ್ಡ ಮಟ್ಟದ ಕೊಡುಗೆಗಳನ್ನು ನೀಡಿದೆ. ಈ ಬಗ್ಗೆ ಮಾಧ್ಯಮ ಮಿತ್ರರಿಗೆ ಮನವರಿಕೆ ಮಾಡಿಕೊಡಲಾಯಿತು ಎಂದು ಅವರು ತಿಳಿಸಿದರು.
ಮಾಜಿ ಮಂತ್ರಿ ಸಾ.ರಾ. ಮಹೇಶ್, ಮೈಸೂರು- ಕೊಡಗು ಲೋಕಸಭೆ ಕ್ಷೇತ್ರದ ಸಂಸದರಾದ ಯಧುವೀರ್ ಒಡೆಯರ್, ಶಾಸಕ ಜಿ.ಡಿ. ಹರೀಶ್ಗೌಡ, ಶ್ರೀವತ್ಸ, ಮಾಜಿ ಶಾಸಕ ಅಶ್ವಿನ್ಕುಮಾರ್, ಮಾಜಿ ಮೇಯರ್ ರವಿಕುಮಾರ್ ಸೇರಿದಂತೆ ಮೈತ್ರಿಪಕ್ಷಗಳ ಅನೇಕ ಮುಖಂಡರು ಹಾಜರಿದ್ದರು.

