ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸರ್ಕಾರಿ ಆಸ್ಪತ್ರೆಗೆ ಬರುವವರು ಅಸಹಾಯಕರು ಮತ್ತು ಬಡವರು. ಆಸ್ಪತ್ರೆಯಲ್ಲೇ ಔಷಧ ಇಲ್ಲದಿದ್ದರೆ ಅವರು ಎಲ್ಲಿಂದ ಹಣ ತರಬೇಕು? ಎಂದು ವಿಧಾನ ಪರಿಷತ್ ಶಾಸಕ ಸಿ.ಟಿ ರವಿ ಪ್ರಶ್ನಿಸಿದ್ದಾರೆ.
ರಾಜ್ಯಾದ್ಯಂತ ಪ್ರತಿ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಕಾಡುತ್ತಿದೆ. ಪರಿಶೀಲನೆ ಮಾಡಿದ 10 ರೋಗಿಗಳ ಪೈಕಿ 6 ರಿಂದ 8 ರೋಗಿಗಳಿಗೆ ಹೊರಗಿನಿಂದ ಔಷಧಿ ತರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರ ರಾಜ್ಯದ ಆಸ್ಪತ್ರೆಗಳಿಗೆ ಔಷಧಿ ಸರಬರಾಜು ಮಾಡದಷ್ಟು ದಿವಾಳಿಯಾಗಿದೆಯೇ..? ಡಯಾಲಿಸಿಸ್ ಘಟಕದ ಟೆಂಡರ್ ಪಡೆದ ಖಾಸಗಿ ಕಂಪನಿಗೆ ಕಳೆದ 10 ತಿಂಗಳಿನಿಂದ ಸರ್ಕಾರ ಒಂದು ರೂಪಾಯಿ ಹಣ ನೀಡಿಲ್ಲ. ಇದರಿಂದ ರೋಗಿಗಳಿಗೆ ಚಿಕಿತ್ಸೆ ಸಿಗದಂತಾಗಿದೆ, ಔಷಧಿಗಳ ಸರಬರಾಜು ಸಂಬಂಧ ಸರ್ಕಾರ ಯಾವುದೇ ಗಂಭೀರ ಕ್ರಮ ಕೈಗೊಂಡಿಲ್ಲ. ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಬಡ ರೋಗಿಗಳಿಗೆ ಅಗತ್ಯವಿರುವ ಔಷಧಿ ಹಾಗೂ ಸೌಲಭ್ಯಗಳನ್ನು ಒದಗಿಸಬೇಕು, ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಸಿಟಿ ರವಿ ಎಚ್ಚರಿಸಿದ್ದಾರೆ.

