ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾನು ಕಾಂಗ್ರೆಸ್ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, ನಾನು ಸಿದ್ದರಾಮಯ್ಯ ಕದ್ದು ಮುಚ್ಚಿ ಮಾತನಾಡಿಲ್ಲ, ಹೈಕಮಾಂಡ್ ಮುಂದೆ ಮಾತಾಡಿದ್ದೇವೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನಾನು ಅದರ ಬಗ್ಗೆ ಮಾತನಾಡುವುದಿಲ್ಲ. ಹೈಕಮಾಂಡ್ ಏನು ಹೇಳುತ್ತದೆ ಅದರಂತೆ ನಡೆದುಕೊಳ್ಳುತ್ತೇನೆ. ಅವರು ಏನು ಹೇಳುತ್ತಾರೋ ಅವರನ್ನೇ ಕೇಳಿ ಎಂದು ಸಿಎಂ ತಿಳಿಸಿದರು.
ದೆಹಲಿಗೆ ಹೋಗುತ್ತೀರಾ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿ, ವರಿಷ್ಠರು ಕರೆಯದಿದ್ರೆ ನಾನೇಕೆ ಹೋಗಲಿ. ಬಜೆಟ್ ಸಭೆ ಇವೆ. ಹೈಕಮಾಂಡ್ ಕರೆದರೆ ಹೋಗುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಡಿ.ಕೆ. ಶಿವಕುಮಾರ್ ಅವರು ಬಜೆಟ್ ಪೂರ್ವ ಸಿದ್ಧತೆಗೆ ಗೈರಾಗಿದ್ದು ಅನುಮತಿ ಪಡೆದಿದ್ದಾರಾ ಎನ್ನುವ ಮಾಧ್ಯಮದವರ ಪ್ರಶ್ನೆಗೆ, ಹೌದು ಅವರು ಲೆಟರ್ ಬರೆದಿದ್ದಾರೆ. ಅಸ್ಸೋಂ ಚುನಾವಣೆ ಹಿನ್ನೆಲೆಯಲ್ಲಿ ದೆಹಲಿಗೆ ಹೋಗುತ್ತೇನೆ ಅಂತ ಬರೆದಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಸಭೆ ನಡೆಯುತ್ತದೆ ಎಂದು ಸಿಎಂ ಹೇಳಿದರು.
ಬಿಜೆಪಿಯೇ ಟಿಕೆಟ್ ನೀಡಲಿಲ್ಲ:
ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯನವರು ಅಧಿಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಟೀಕೆ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಬಿಜೆಪಿ ಪಕ್ಷದವರೇ ತಮ್ಮ ಪಕ್ಷದ ಪ್ರತಾಪ್ ಸಿಂಹರಿಗೆ ಟಿಕೆಟ್ ನೀಡಲಿಲ್ಲ ಎಂದು ವ್ಯಂಗ್ಯವಾಡಿದರು.

