ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಗುಸುಗುಸು

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಗುಸುಗುಸು ಜೋರಾಗಿದೆ. ಬಜೆಟ್​​​ ಗೂ ಮುನ್ನವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಠಿಕಾಣಿ ಹೂಡಿದ್ದು, ಸಿಎಂ ಹುದ್ದೆಗಾಗಿ ಹೈಕಮಾಂಡ್ ನಾಯಕರ ಮನವೊಲಿಕೆಗೆ ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ.

ಶತಾಯಗತಾಯ ಸಿಎಂ ಪಟ್ಟಕ್ಕೇರಲೇಬೇಕೆಂಬ ಹಠಕ್ಕೆ ಬಿದ್ದಿರುವ ಡಿಕೆ ಶಿವಕುಮಾರ್, ಈ ಬಾರಿ ನೇರವಾಗಿ ಸೋನಿಯಾ ಗಾಂಧಿ ಅವರನ್ನೇ ಭೇಟಿಯಾಗಿ ತಮ್ಮ ಮನದಾಳದ ಮಾತುಗಳನ್ನು ಬಿಚ್ಚಿಡಲು ಸಜ್ಜಾಗಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ.

- Advertisement - 

 ಡಿಕೆ ಶಿವಕುಮಾರ್ ಅವರ ಈ ಕದ್ದು ಮುಚ್ಚಿ ತಂತ್ರಗಾರಿಕೆಗೆ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಹೀಗಾಗಿ ಮತ್ತೆ ಕಾಂಗ್ರೆಸ್​​ನಲ್ಲಿ ಸಿಎಂ ಕುರ್ಚಿ ಕಿತ್ತಾಟ ಮುನ್ನೆಲೆಗೆ ಬಂದಿದ್ದು, ಇದು ಯಾವ ಸ್ವರೂಪ ಪಡೆದುಕೊಳ್ಳುತ್ತೋ ಕಾದುನೋಡಬೇಕಿದೆ.

 

- Advertisement - 

 

 

 

Share This Article
error: Content is protected !!
";