ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆ ಮಾಡುವ ಪ್ರಸ್ತಾವನೆಯು ಕೇಂದ್ರ ಸರ್ಕಾರದ ಅಧೀನಕ್ಕೆ ಬರುತ್ತದೆ. ಇದರಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ ಎಂದು ಸಾರಿಗೆ ಸಚಿವ ಆರ್.ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ದರ ಪರಿಷ್ಕರಣೆಗಾಗಿ ಕೇಂದ್ರ ಸರ್ಕಾರವು ‘ದರ ನಿಗದಿ ಸಮಿತಿ‘ಯನ್ನು ರಚಿಸುತ್ತದೆ. ಈ ಸಮಿತಿಯು ನೀಡುವ ವರದಿಯ ಆಧಾರದ ಮೇಲೆ ದರಗಳು ನಿರ್ಧಾರವಾಗುತ್ತವೆ.
ಪ್ರತಿಪಕ್ಷಗಳು ಮೆಟ್ರೋ ದರ ಏರಿಕೆಯನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರವನ್ನು ಟೀಕಿಸುತ್ತಿರುವುದು ಸರಿಯಲ್ಲ. ಈ ಪ್ರಕ್ರಿಯೆಯು ಸಂಪೂರ್ಣವಾಗಿ ತಾಂತ್ರಿಕ ಮತ್ತು ಕೇಂದ್ರದ ನಿಯಮಾವಳಿಗಳಿಗೆ ಒಳಪಟ್ಟಿರುತ್ತದೆ ಎಂದು ಸಚಿವರು ತಿಳಿಸಿದರು.
ಬಿಎಂಆರ್ಸಿಎಲ್ ಮೆಟ್ರೋ ದರ ನಿಗದಿಗಾಗಿ ರಚಿಸಲಾಗಿದ್ದ ತ್ರಿಸದಸ್ಯ ಸಮಿತಿಯ ಸದಸ್ಯರ ಹೆಸರುಗಳು ಈ ಕೆಳಗಿನಂತಿವೆ:
ನ್ಯಾಯಮೂರ್ತಿ ಆರ್. ಥಾರಣಿ – ಮದ್ರಾಸ್ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಈ ಸಮಿತಿಯ ಅಧ್ಯಕ್ಷರು.
ಸತೀಂದರ್ ಪಾಲ್ ಸಿಂಗ್ – ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಗಳು.
ಡಾ. ಇ.ವಿ. ರಮಣರೆಡ್ಡಿ – ಕರ್ನಾಟಕ ಸರ್ಕಾರದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು.

