ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಮೂರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2026-27ನೇ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಆನ್ಲೈನ್ನಲ್ಲಿ ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ದಿನಾಂಕವನ್ನು ಫೆ.28 ರವರಗೆ ವಿಸ್ತರಿಸಲಾಗಿದ್ದು, ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, ಪಾರ್ಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಇಲಾಖೆಯ ವಸತಿ ಶಾಲೆಗಳು ಹಾಗೂ ಜಿಲ್ಲಾ ಹಾಗೂ ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು. ಸೇವಾಸಿಂಧು ವೆಬ್ಸೈಟ್ https://sevasindhuservices.karnataka.gov.in ಭೇಟಿ ನೀಡಬಹುದು ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ರೇಖಾ ತಿಳಿಸಿದ್ದಾರೆ.

