ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2026-27ನೇ ಸಾಲಿನ ರಾಜ್ಯ ಬಜೆಟ್‌ಗೆ ಪೂರ್ವ ಸಿದ್ಧತೆಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಸತಿ ಇಲಾಖೆ, ನಗರಾಭಿವೃದ್ಧಿ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳ ಜೊತೆ ಸಭೆ ನಡೆಸಿ, ಅವರ ಬೇಡಿಕೆಗಳು ಹಾಗೂ ಇಲಾಖೆಯ ಯೋಚನೆ- ಯೋಜನೆಗಳನ್ನು ಆಲಿಸಿದರು.
ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಶಾಸಕ ಎನ್.ಎ.ಹ್ಯಾರಿಸ್, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ, ಶಾಸಕ ಬಿ.ಆರ್.ಪಾಟೀಲ್,
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಸೇರಿದಂತೆ ಆರ್ಥಿಕ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

