ಮಹಿಳಾ ಮತ್ತು ಮಕ್ಕಳ ಸಚಿವರ ಜೊತೆ ಸಭೆ ನಡೆಸಿದ ಸಿದ್ದರಾಮಯ್ಯ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ‌ಸಿದ್ದರಾಮಯ್ಯ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲ ಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವಿಜ್ಞಾನ & ತಂತ್ರಜ್ಞಾನ ಮತ್ತು ಸಣ್ಣ ನೀರಾವರಿ ಇಲಾಖೆ, ಜಲಸಂಪನ್ಮೂಲ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳ ಜೊತೆ 2026-27ನೇ ಸಾಲಿನ ಆಯವ್ಯಯ ಪೂರ್ವ‌ಸಭೆ ನಡೆಸಿ, ಇಲಾಖೆಯ ಅನುದಾನದ ಬೇಡಿಕೆ ಸ್ವೀಕರಿಸಿ, ನೂತನ ಕಾರ್ಯಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್,  ವಿಜ್ಞಾನ & ತಂತ್ರಜ್ಞಾನ ಮತ್ತು ಸಣ್ಣ ನೀರಾವರಿ ಇಲಾಖೆ ಸಚಿವ ಬೋಸರಾಜ್, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ, ಶಾಸಕ ಬಿ.ಆರ್.ಪಾಟೀಲ್,

- Advertisement - 

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಸೇರಿದಂತೆ ಆರ್ಥಿಕ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

 

- Advertisement - 

Share This Article
error: Content is protected !!
";