ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ನಡೆಸಿದ 2025-26ನೇ ಸಾಲಿನ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್ ಜೆಂಡರ್ಸ್) ಮೂಲ ಹಂತದ ಸಮೀಕ್ಷೆಯ ವರದಿಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಬಹುನಿರೀಕ್ಷಿತ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷಾ ವರದಿಯನ್ನು ರಾಜ್ಯ ಸರ್ಕಾರಕ್ಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ನಿನ್ನೆ ಸಲ್ಲಿಸಿದರು.
ರಾಜ್ಯದ 15 ಜಿಲ್ಲೆಗಳಲ್ಲಿ (ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಧಾರವಾಡ, ಹಾವೇರಿ, ಗದಗ, ಕಲಬುರ್ಗಿ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ ಮತ್ತು ವಿಜಯನಗರ) ಮರು ಸಮೀಕ್ಷೆಯಿಂದ ಒಟ್ಟು 23,395 ಮಾಜಿ ದೇವದಾಸಿ ಮಹಿಳೆಯರು ಗುರುತಿಸಿಕೊಂಡಿರುತ್ತಾರೆ.
ಮರು ಸಮೀಕ್ಷೆಯ ವಿಶ್ಲೇಷಣಾ ವರದಿಯಲ್ಲಿ ಮಾಜಿ ದೇವದಾಸಿ ಮಹಿಳೆಯರು ಹಾಗೂ 01ನೇ ತಲೆಮಾರು, 02ನೇ ತಲೆಮಾರು ಮತ್ತು 03ನೇ ತಲೆಮಾರಿನ ಕುಟುಂಬದವರ ಮಾಹಿತಿ, ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿಗಾಗಿ ಮಾಡಲಾಗಿರುವ ಶಿಫಾರಸ್ಸುಗಳು ಸಮೀಕ್ಷಾ ವರದಿಯಲ್ಲಿವೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಮತ್ತು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

