ಹಾಲು ತರಲು ಹೊರಟಿದ್ದ ಮಕ್ಕಳಿಬ್ಬರ ಮೇಲೆ ಶಾಲಾ ಬಸ್ ಹರಿದು ಸಾವು

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪೋಷಕರೊಂದಿಗೆ ಹಾಲು ತರಲು ಹೊರಟಿದ್ದ ಇಬ್ಬರು ಮಕ್ಕಳು ಶಾಲಾ ಬಸ್​ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಗರದ ಥಣಿಸಂದ್ರದ ಪೊಲೀಸ್ ಕ್ವಾರ್ಟರ್ಸ್​​ ಬಳಿ ನಡೆದಿದೆ.

ವರ್ಷಾ(2) ಹಾಗೂ ಭಾನು(4) ಮೃತ ಮಕ್ಕಳು. ಖಾಸಗಿ ಶಾಲೆಗೆ ಸೇರಿದ ಬಸ್ ಬೈಕ್​​ಗೆ​ ಡಿಕ್ಕಿ ಹೊಡೆದು ಮಕ್ಕಳು ಸಾವನ್ನಪ್ಪಿದ್ದಾರೆ. ಸದ್ಯ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಡಿಸಿಪಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಹೆಣ್ಣೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement - 

ಏನಿದು ಘಟನೆ?
ಯಾದಗಿರಿ ಮೂಲದ ನಾಗನಗೌಡ ಅವರು ಸಿಎಆರ್​ನಲ್ಲಿ ಕಾನ್ಸ್​ಟೇಬಲ್​​ ಆಗಿದ್ದಾರೆ. ತಮ್ಮ ಮಗಳು ವರ್ಷ ಮತ್ತು ಅಣ್ಣನ ಮಗಳಾದ ಭಾನು ಇಬ್ಬರನ್ನು ಬೈಕ್​ನಲ್ಲಿ ಕೂರಿಸಿಕೊಂಡು ಹಾಲು ತರಲು ಹೋಗುತ್ತಿದ್ದರು.
ಇದೇ ವೇಳೆ ಸ್ಕೂಲ್ ಬಸ್ ಮಕ್ಕಳ ಪಿಕಪ್​ಗೆ ತೆರಳುತ್ತಿತ್ತು. ಬಸ್​ ಬರುವುದನ್ನು ಕಂಡು ನಾಗನಗೌಡ ಅವರು ಬೈಕ್ ನಿಲ್ಲಿಸಿದ್ದರು. ಹೆಣ್ಣೂರು ಸಂಚಾರಿ ಠಾಣೆ ವ್ಯಾಪ್ತಿಯ ಥಣಿಸಂದ್ರ ಬಳಿ ಶಾಲಾ ಬಸ್​ ಯೂಟರ್ನ್ ತೆಗೆದುಕೊಳ್ಳುವಾಗ ಬೈಕ್​ಗೆ ಡಿಕ್ಕಿ ಹೊಡೆದಿದೆ.

ಈ ವೇಳೆ ಬೈಕ್​ನಿಂದ ಕೆಳಗೆ ಬಿದ್ದ ಇಬ್ಬರು ಮಕ್ಕಳ ಮೇಲೆ ಬಸ್ ಹಿಂಬದಿ ಚಕ್ರ ಹರಿದಿದೆ. ಕೂಡಲೇ ಮಕ್ಕಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಕಾನ್ಸ್​ಟೇಬಲ್ ನಾಗನಗೌಡ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

- Advertisement - 

ಬಸ್ ಚಾಲಕ ವಶಕ್ಕೆ:
ಇಬ್ಬರು ಮಕ್ಕಳ ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಆಸ್ಪತ್ರೆ ಬಳಿ ಕುಟುಂಬಸ್ಥರು ಜಮಾಯಿಸಿದ್ದು
, ಮಕ್ಕಳನ್ನ‌ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಹೆಣ್ಣೂರು ಸಂಚಾರ ಪೊಲೀಸರು ಶಾಲಾ ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Share This Article
error: Content is protected !!
";