ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ

News Desk
- Advertisement -  - Advertisement - 

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆದಾಯಕ್ಕಿಂತ ಹೆಚ್ಚಿನ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕೋಪಯೋಗಿ ಇಲಾಖೆಯ ಕೆ-ಶಿಪ್ ವಿಭಾಗದ ಮುಖ್ಯ ಇಂಜಿನಿಯರ್ ಪುರುಷೋತ್ತಮ್ ದಾಸ್ ಹೆಗಡೆ ಅವರಿಗೆ ಸೇರಿದ ಬೆಂಗಳೂರು ಮತ್ತು ಮೈಸೂರಿನ ಒಟ್ಟು 11 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಶಾಕ್ ನೀಡಿದ್ದಾರೆ.

ಬೆಂಗಳೂರಿನ ಎರಡು ಸ್ಥಳಗಳು ಮತ್ತು ಮೈಸೂರಿನ ಐದಾರು ಸ್ಥಳಗಳು ಸೇರಿದಂತೆ ಒಟ್ಟು 11 ಕಡೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

- Advertisement - 

ಪ್ರಾಥಮಿಕ ತನಿಖೆಯಲ್ಲಿ ಪುರುಷೋತ್ತಮ್ ದಾಸ್ ಹೆಗಡೆ ಅವರು ತಮ್ಮ ಆದಾಯದ ಮೂಲಗಳಿಗೆ ತಕ್ಕಂತೆ ಆಸ್ತಿ ಹೊಂದಿಲ್ಲ ಎಂಬುದು ಕಂಡುಬಂದಿದೆ. ದಾಳಿಯ ವೇಳೆ, ನಗದು, ಚಿನ್ನಾಭರಣ, ಬ್ಯಾಂಕ್ ಬ್ಯಾಲೆನ್ಸ್ ಸೇರಿದಂತೆ ಚರ ಮತ್ತು ಸ್ಥಿರ ಆಸ್ತಿಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.

 ಇದರಲ್ಲಿ ಸೈಟ್‌ಗಳು, ಮನೆಗಳು, ಯೋಜನೆಗಳು, ವಿವಿಧ ಕಂಪನಿಗಳಲ್ಲಿನ ಹೂಡಿಕೆಗಳು, ಮತ್ತು ಎರಡು ಶಾಲೆಗಳನ್ನು ಒಳಗೊಂಡಿರುವ ಟ್ರಸ್ಟ್‌ಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಸಂಪೂರ್ಣ ತನಿಖೆಯ ನಂತರ ವಿವರವಾದ ವರದಿಯನ್ನು ಸಲ್ಲಿಸಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

- Advertisement - 

 

Share This Article
error: Content is protected !!
";