ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಅಧ್ಯಕ್ಷರಾದ ಪ್ರೊ.ಎಂ.ಗೋವಿಂದರಾವ್ ಅವರು ಸರ್ಕಾರಕ್ಕೆ ಸಲ್ಲಿಸಿರುವ ವರದಿಯ ಅಂಶಗಳನ್ನು ಆಧರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿ, ನೈಸರ್ಗಿಕ ಕಾರಣಗಳಿಂದಾಗಿ ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಜಿಲ್ಲೆಗಳಲ್ಲಿ ಮುಂದೆ ಕೈಗೊಳ್ಳಬೇಕಿರುವ ಕಾರ್ಯಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಸಚಿವರಾದ ಡಿ.ಸುಧಾಕರ್, ಕೆಕೆಆರ್ಡಿಬಿ ಅಧ್ಯಕ್ಷ ಅಜಯ್ ಸಿಂಗ್, ನೀತಿ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್, ಅಸಮತೋಲನ ನಿವಾರಣಾ ಸಮಿತಿ ಅಧ್ಯಕ್ಷ ಎಂ.ಗೋವಿಂದರಾಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತು ಆರ್ಥಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

