ಎಂಸಿಎ ವ್ಯವಸ್ಥಾಪಕ ನಿರ್ದೇಶಕರಾಗಿ ಆನಂದ್ ಅಧಿಕಾರ ಸ್ವೀಕಾರ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ (ಕೆಎಸ್‍ಎಂಸಿ
&ಎ) ವ್ಯವಸ್ಥಾಪಕ ನಿರ್ದೇಶಕರಾಗಿ ಬಿ. ಆನಂದ್ ಅವರು ಗುರುವಾರ ಅಧಿಕಾರ ವಹಿಸಿಕೊಂಡರು.

       ಕೆಎಸ್‍ಎಂಸಿ&ಎ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮೊಹಮ್ಮದ್ ಅತೀಕುಲ್ಲಾ ಷರೀಫ್ ಅವರನ್ನು ಸರ್ಕಾರ ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರಿನ ಜಂಟಿನಿರ್ದೇಶಕರ ಹುದ್ದೆಗೆ ವರ್ಗಾವಣೆಗೊಳಿಸಿದ ಹಿನ್ನೆಲೆಯಲ್ಲಿ,

- Advertisement - 

ತೆರವಾದ ಸ್ಥಾನಕ್ಕೆ ಚಿತ್ರದುರ್ಗ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಬಿ. ಆನಂದ್ ಅವರನ್ನು ಸರ್ಕಾರ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್‍ಗೆ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಿದ್ದು, ಬೆಂಗಳೂರಿನ ಕಚೇರಿಯಲ್ಲಿ ಆನಂದ್ ಅವರು ಗುರುವಾರ ಅಧಿಕಾರ ವಹಿಸಿಕೊಂಡರು. 

- Advertisement - 
Share This Article
error: Content is protected !!
";