ರೈತರ ಯಶಸ್ವಿ ಪಾದಯಾತ್ರೆ, ಸರ್ಕಾರದಿಂದ ಹೆಚ್ಚಿನ ಅನುದಾನ ಕೊಡಿಸುವ ಭರವಸೆ ನೀಡಿದ ಸುಧಾಕರ್

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯ ರೈತರು ಭದ್ರಾ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರ ಘೋಷಿಸಿರುವ 5,300 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುವಂತೆ ಮತ್ತು ರಾಜ್ಯ ಸರ್ಕಾರವು ಬಜೆಟ್‌ನಲ್ಲಿ 5,000 ಕೋಟಿ ರೂಪಾಯಿಗಳನ್ನು ಮೀಸಲಿಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಡಿಎಸ್ಎಸ್ ಸಂಘಟನೆಗಳು, ಕನ್ನಡ ಕರವೇ ಮತ್ತು ವಿಹೆಚ್ ಪಿ ಮತ್ತು ಜನಪರ ಸಂಘಟನೆಗಳ ನೇತೃತ್ವದಲ್ಲಿ ಪಾದಯಾತ್ರೆ ನಡೆಸಿದರು.
ಹಿರಿಯೂರು ಮತ್ತು ಹೊಳಲ್ಕೆರೆಯಿಂದ ಆರಂಭಿಸಿದ ಪಾದಯಾತ್ರೆಯು
40 ಕಿ.ಮೀ ದೂರ ಕ್ರಮಿಸಿ ಚಿತ್ರದುರ್ಗದ ಒನಕೆ ಓಬವ್ವ ವೃತ್ತಕ್ಕೆ ತಲುಪಿತು.

ಚಿತ್ರದುರ್ಗ ಜಿಲ್ಲೆಯ ರೈತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಭದ್ರಾ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರ ಘೋಷಿಸಿರುವ 5,300 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುವಂತೆ ಮತ್ತು ರಾಜ್ಯ ಸರ್ಕಾರವು ಬಜೆಟ್‌ನಲ್ಲಿ 5,000 ಕೋಟಿ ರೂಪಾಯಿಗಳನ್ನು ಮೀಸಲಿಡುವಂತೆ ಒತ್ತಾಯಿಸಿ ರೈತರು ಪಾದಯಾತ್ರೆ ನಡೆಸಿದರು.

- Advertisement - 

ಪಾದಯಾತ್ರೆಯು ಜಿಲ್ಲಾಧಿಕಾರಿಗಳ ವೃತ್ತಕ್ಕೆ ತಲುಪಿದಾಗ, ರೈತರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು ಮತ್ತು ನೀರಿಗಾಗಿ ಒಗ್ಗಟ್ಟು ಪ್ರದರ್ಶಿಸಿದರು.
ರೈತರು “ನೀರು ಬೇಕು
, ನೀರು ಬೇಕು” ಎಂದು ಕೂಗಿದರು ಮತ್ತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರಲ್ಲದೆ ಜನಪ್ರತಿನಿಧಿಗಳ ರಾಜೀನಾಮೆಗೆ ಒತ್ತಾಯಿಸಿದರು.

- Advertisement - 

ಚಿತ್ರದುರ್ಗ ಜಿಲ್ಲಾಧಿಕಾರಿಗಳ ವೃತ್ತದಲ್ಲಿ ರೈತರು ನೀರಿಗಾಗಿ ಒಗ್ಗಟ್ಟು ಪ್ರದರ್ಶಿಸಿದ್ದರಿಂದಾಗಿ ಬಿಗುವಿನ ವಾತಾವರಣ ಕಂಡು ಬಂದಿತು. ಜಿಲ್ಲಾಧಿಕಾರಿಗಳು ರೈತ ಸಂಘದ ನಾಯಕರೊಂದಿಗೆ ಮಾತುಕತೆ ನಡೆಸಿ, ಅವರ ಬೇಡಿಕೆಗಳನ್ನು ಸರ್ಕಾರಕ್ಕೆ ಮುಟ್ಟಿಸುವ ಭರವಸೆ ನೀಡಿದರು.
ಸ್ಥಳಕ್ಕೆ ಜಲಸಂಪನ್ಮೂಲ ಸಚಿವರು ಅಥವಾ ಜಲಸಂಪನ್ಮೂಲ ಇಲಾಖೆ ಎಂಡಿ ಅವರು ಆಗಮಿಸಬೇಕು, ಜಿಲ್ಲಾ ಉಸ್ತುವಾರಿ ಸಚಿವರನ್ನ ಕರೆಸಬೇಕು ಎಂದು ರೈತರು ಪಟ್ಟು ಹಿಡಿದರು.
 

ಈ ಸಂದರ್ಭದಲ್ಲಿ, ಜಿಲ್ಲಾಧಿಕಾರಿಗಳ ವೃತ್ತದಲ್ಲಿ ಬಿಗುವಿನ ವಾತಾವರಣ ಕಂಡುಬಂದಿದೆ. ರೈತರು ಮತ್ತು ಸರ್ಕಾರದ ನಡುವೆ ಮಾತುಕತೆ ನಡೆಯುತ್ತಿದ್ದು, ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳುವ ನಿರೀಕ್ಷೆಯಿದೆ.

ರೈತರ ಸಮಸ್ಯೆಗಳಿಗೆ ಸರ್ಕಾರದ ಗಮನ ಸೆಳೆಯಲು ವಿಫಲವಾಗಿರುವುದು ರೈತರು ನೀರಿಗಾಗಿ ಒಗ್ಗಟ್ಟು ಪ್ರದರ್ಶಿಸಿದರು ಮತ್ತು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಕೇಂದ್ರ ಸರ್ಕಾರ ಭರವಸೆ ನೀಡಿದ್ದ 5300 ಕೋಟಿ ರೂ.ಗಳನ್ನು ಕೊಡಲಿ, ಮುಂಬರುವ ಬಜೆಟ್ ನಲ್ಲಿ ರಾಜ್ಯ ಸರ್ಕಾರದಿಂದ ಹೆಚ್ಚಿನ ಅನುದಾನ ಕೊಡಿಸಲಾಗುತ್ತದೆ ಎಂದು ಭರವಸೆ ನೀಡಿದರು.
ಈ ಹಂತದಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಾಧಿಕಾರಿಗಳು ಹಾಜರಿದ್ದರು.

ಪಾದಯಾತ್ರೆಗಳ ಮೇಲೆ ಹೂವಿನ ಮಳೆ:
ಭದ್ರಾ ಮೇಲ್ದಂಡೆ ಯೋಜನೆಗಾಗಿ ಮೂರು ದಿಕ್ಕುಗಳಿಂದ ಜಿಲ್ಲೆ
ಪ್ರವೇಶಿಸುತ್ತಿದ್ದ ರೈತ ಸಂಘದ ಪಾದಯಾತ್ರೆಯನ್ನು ಚಿತ್ರದುರ್ಗ ಜಿಲ್ಲಾ ನೀರಾವರಿ ಹೋರಾಟ ಸಮಿತಿ ಸಂಚಾಲಕರು, ಪದಾಧಿಕಾರಿಗಳು ಶುಕ್ರವಾರ ಬೆಳಿಗ್ಗೆ ಸ್ವಾಗತ ಮಾಡಿಕೊಂಡರು.

ಈಚಘಟ್ಟದ ಸಿದ್ದವೀರಪ್ಪ ನೇತೃತ್ವದಲ್ಲಿ ಆಗಮಿಸುತ್ತಿದ್ದ ಪಾದಯಾತ್ರೆಯನ್ನು ಜಾನಕೊಂಡ ಬಳಿ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ರೈತರ ಮೇಲೆ ಹೂವಿನ ಮಳೆ ಸುರಿಸಿ ಚಳವಳಿಗಾರರನ್ನು ಗೌರವಿಸಿದರು.
ಪತ್ರಕರ್ತರು
, ಜಿಲ್ಲಾ ನೀರಾವರಿ ಹೋರಾಟ ಸಮಿತಿ ಸಂಚಾಲಕರು, ಪದಾಧಿಕಾರಿಗಳು ಹೂವಿನ ಮಳೆ ಸುರಿಸಿ ಸ್ವಾಗತಿಸಿದ್ದಕ್ಕೆ

ಪಾದಯಾತ್ರೆಗಳು ಭಾವುಕರಾದರು. ನಿಮ್ಮಗಳ ಬೆಂಬಲ ಸದಾ ಇರಲಿ. ನಾವೆಲ್ಲರೂ ಒಗ್ಗೂಡಿ ಜಿಲ್ಲೆಯ ರೈತರ ಋಣ ತೀರಿಸೋಣಾ. ಪ್ರತಿಯೊಬ್ಬ ರೈತರ ಭೂಮಿಗೆ ನೀರು ಹರಿಯುವವರೆಗೂ ವಿರಮಿಸುವುದಿಲ್ಲವೆಂದು ಪ್ರತಿಜ್ಞೆ ಮಾಡಿದರು.
ಸಮಿತಿ ಸಂಚಾಲಕ ಮಾತನಾಡಿ, ಚಿತ್ರದುರ್ಗ ಜಿಲ್ಲಾ ನೀರಾವರಿ ಹೋರಾಟ ಸಮಿತಿ1997ರಲ್ಲಿ ಅಸ್ಥಿತ್ವಕ್ಕೆ ಬಂದ ದಿನದಿಂದಲೂ ಜಿಲ್ಲೆಯ ರೈತಸಂಘ, ಕಾರ್ಮಿಕ, ಕನ್ನಡಪರ ಸೇರಿ ವಿವಿಧ ಸಂಘಟನೆಗಳು ಮುಂಚೂಣಿಯಲ್ಲಿ ನಿಂತು ಚಳವಳಿಯನ್ನು ಮುನ್ನಡೆಸಿವೆ ಎಂದು ಸ್ಮರಿಸಿದರು.

ಹೋರಾಟದ ಫಲವೇ ಯೋಜನೆ ಜಾರಿಗೊಂಡಿದೆ. ಆದರೆ, ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದು ಆತಂಕ ತಂದಿದೆ. ಅದನ್ನು ಚುರುಕುಗೊಳಿಸುವಂತೆ ಒತ್ತಡ ತರಲು ರೈತಸಂಘ
ಹಮ್ಮಿಕೊಂಡಿರುವ ಪಾದಯಾತ್ರೆ, ಬಹಿರಂಗ ಸಮಾವೇಶ ಅತ್ಯಂತ ಸೂಕ್ತ ನಿರ್ಧಾರವಾಗಿದೆ ಎಂದರು.
ಸರ್ಕಾರದ ಮಟ್ಟದಲ್ಲಿ ಸಚಿವರು, ಮುಖ್ಯಮಂತ್ರಿಯೊAದಿಗೆ ಸಭೆ ನಡೆಸಿ, ಸಮಾವೇಶ, ಸಭೆ, ಪ್ರತಿಭಟನೆಗಳ ಮೂಲಕ ಯೋಜನೆ ಜಾರಿಗೆ ಶ್ರಮಿಸಿದ ಜಿಲ್ಲಾ ನೀರಾವರಿ ಹೋರಾಟ ಸಮಿತಿಯ ಬುನಾದಿಯೇ ರೈತಸಂಘ, ಕಾರ್ಮಿಕ ಸಂಘಟನೆಗಳು.

ಮುಂದಿನ ದಿನಗಳಲ್ಲಿ ವಿವಿಧ ಹಂತದ ಹೋರಾಟ ಮೂಲಕ ಕೇಂದ್ರ-ರಾಜ್ಯ ಸರ್ಕಾರ ಭದ್ರಾ ಯೋಜನೆಗೆ ಅನುದಾನ ನೀಡುವ ರೀತಿ ಒತ್ತಡ ತರುವ ಕೆಲಸ ಒಗ್ಗೂಡಿ ಮಾಡೋಣಾ ಎಂದರು.
ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆಗೆ ನಾವು ಯಾರೂ ಹಣ ಕೊಡಿ ಎಂದು ಕೇಂದ್ರ ಸರ್ಕಾರಕ್ಕೆ ಕೇಳಿರಲಿಲ್ಲ. ಅವರೇ 5,300 ಕೋಟಿ ರೂ. ಬಜೆಟ್‌ನಲ್ಲಿ ಘೋಷಿಸಿದ್ದರು. ಆದರೆ, ಈಗ ರಾಜ್ಯ ಸರ್ಕಾರದ ಮೇಲಿನ
ದ್ವೇಷಕ್ಕೆ ಹಣ ಬಿಡುಗಡೆ ಮಾಡದೆ ನಾಟಕ ಆಡಿದ್ರೆ ಹೇಗೆ ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರ ಕೂಡ ಕೇಂದ್ರದತ್ತ ಬೊಟ್ಟು ತೋರಿಸಿ ತನ್ನ ಜವಾಬ್ದಾರಿಯಿಂದ
ನುಣಚಿಕೊಳ್ಳುವ ಕೆಲಸ ಮಾಡುತ್ತಿದೆ. ಈ ಎರಡು ಸರ್ಕಾರಗಳಿಗೆ ಚಳವಳಿ ಮೂಲಕ ಬಿಸಿ ಮುಟ್ಟಿಸಿ ಹಣ ತರುವ ಶಕ್ತಿ ರೈತಸಂಘ-ಜಿಲ್ಲಾ ನೀರಾವರಿ ಹೋರಾಟ ಸಮಿತಿಗೆ ಇದೆ. ಅದನ್ನು ಮಾಡಿಯೇ ತಿರುತ್ತೇವೆ. ನಾವು ಭಿಕ್ಷೆ ಬೇಡುತ್ತಿಲ್ಲ, ನಮ್ಮ ಹಕ್ಕೋತ್ತಾಯ ಮಂಡಿಸುತ್ತಿದ್ದೇವೆ ಎಂದರು.

ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಟಿ ತಿಪ್ಪೇಸ್ವಾಮಿ, ಸಿದ್ರಾಮಣ್ಣ, ಹೆಚ್.ಆರ್.ತಿಮ್ಮಯ್ಯ, ಬಬ್ಬೂರು ಸುರೇಶ್, ತಾಲೂಕು ಅಧ್ಯಕ್ಷ ಬಿ.ಎಸ್.ರಂಗಸ್ವಾಮಿ, ಸಂಚಾಲಕರಾದ ಚಳ್ಳಕೆರೆ ಬಸವರಾಜ್, ನರೇನಹಳ್ಳಿ ಅರುಣ್‌ಕುಮಾರ್, ಜೋಗಿಮಟ್ಟಿ ಮಹೇಶಬಾಬು, ಪತ್ರಕರ್ತರಾದ ಎಚ್.ಲಕ್ಷ್ಮಣ್, ಶ್ರೀನಿವಾಸ ನಾಯ್ಕ್ ಇತರರಿದ್ದರು.

 

Share This Article
error: Content is protected !!
";