ಸಾವಿನಲ್ಲೂ ಹಿರಿಯ ಪತ್ರಕರ್ತರಿಗೆ ಅವಮಾನ ಮಾಡಿದ ಕಾಂಗ್ರೆಸ್ ಸರ್ಕಾರ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತರು
, ವಿಧಾನ ಪರಿಷತ್ ಮಾಜಿ ಸದಸ್ಯರಾದ ರಾಮಯ್ಯನವರ ಅಂತ್ಯ ಸಂಸ್ಕಾರವನ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವುದಾಗಿ ಘೋಷಣೆ ಮಾಡಿದ್ದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ,

ಸರ್ಕಾರಿ ಗೌರವಕ್ಕೆ ತಗುಲಿದ ಖರ್ಚು ವೆಚ್ಚ ಪಾವತಿಸುವಂತೆ ದಿವಂಗತ ರಾಮಯ್ಯನವರ ಕುಟುಂಬಕ್ಕೆ ಬಿಲ್  ಕಳುಹಿಸಿರುವ ಘಟನೆ ನಾಡಿನ ಹಿರಿಯ ಪತ್ರಕರ್ತರಿಗೆ ಮಾಡಿರುವ ಅಪಮಾನದ ಜೊತೆಗೆ ರಾಜ್ಯ ಕರ್ನಾಟಕ ಕಾಂಗ್ರೆಸ್ ಸರ್ಕಾರ ಯಾವ ಮಟ್ಟಕ್ಕೆ ದಿವಾಳಿ ಆಗಿದೆ, ಎಷ್ಟು ಲಜ್ಜೆಗೆಟ್ಟ ಸ್ಥಿತಿಗೆ ತಲುಪಿದೆ ಎನ್ನುವುದಕ್ಕೆ ಮತ್ತೊಂದು ತಾಜಾ ಉದಾಹರಣೆಯಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತೀವ್ರ ವಾಗ್ದಾಳಿ ಮಾಡಿದರು.

- Advertisement - 

ಗೃಹ ಸಚಿವ ಡಾ.ಜಿ ಪರಮೇಶ್ವರ ಅವರೇ, ರಾಮಯ್ಯನವರ ಅಂತ್ಯಸಂಸ್ಕಾರದ ವೇಳೆ ಗಣ್ಯ ವ್ಯಕ್ತಿಗಳ ಭೇಟಿಗೆ ನಡೆಸಿದ ಸಿದ್ಧತೆಗಳು, ಬ್ಯಾರಿಕೇಡ್ ಅಳವಡಿಕೆ, ಭದ್ರತಾ ವ್ಯವಸ್ಥೆ, ಮತ್ತು ಇತರ ಲಾಜಿಸ್ಟಿಕ್ ಸಿದ್ಧತೆಗಳಿಗೆ ಹಣ ಪಾವತಿಸುವಂತೆ ನಿಮ್ಮ ಪೊಲೀಸ್ ಇಲಾಖೆ ಓರ್ವ ವ್ಯಾಪಾರಿಯ ಮೂಲಕ ರಾಮಯ್ಯನವರ ಕುಟುಂಬಸ್ಥರಿಗೆ ಬಿಲ್ ನೀಡಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ಇದು ನಿಜವೇ ಆದರೆ, ನಿಮ್ಮ ಕಾಂಗ್ರೆಸ್ ಸರ್ಕಾರದಂತಹ ಲಜ್ಜೆಗೇಡಿ ಸರ್ಕಾರ ಮತ್ತೊಂದಿಲ್ಲ ಎಂದು ಅಶೋಕ್ ಹರಿಹಾಯ್ದರು.

- Advertisement - 

 

 

Share This Article
error: Content is protected !!
";