ಕಾಂಗ್ರೆಸ್ ಹೈಕಮಾಂಡ್ ಗೂ ಹೇಸಿಗೆ ಹುಟ್ಟಿಸಿದ ಸಾವಿರ ದಿನಗಳ ಸಂಭ್ರಮಾಚರಣೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಾವಿರಾರು ಎಡವಟ್ಟುಗಳ ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಾಚರಣೆ ಬಗ್ಗೆ ಕರ್ನಾಟಕದ ಜನತೆಗೆ ಮಾತ್ರ ಹೇಸಿಗೆ ಹುಟ್ಟಿಲ್ಲ, ಸ್ವತಃ ಕಾಂಗ್ರೆಸ್ ಹೈಕಮಾಂಡ್ಗೂ ಹೇಸಿಗೆ ಹುಟ್ಟಿದಂತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರೇ, ಸಾವಿರ ದಿನಗಳ ಸಂಭ್ರಮಾಚರಣೆಗೆ ನಿಮ್ಮ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನಾಯಕರು ಯಾಕೆ ಬರಲಿಲ್ಲ? ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರು ಬೆಂಗಳೂರಿನಲ್ಲೇ ಇದ್ದರು ಬರಲಿಲ್ಲವಲ್ಲ ಯಾಕೆ? ಎಂದು ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

- Advertisement - 

ದೆಹಲಿಗೆ ಕಳುಹಿಸಬೇಕಾದ ಲೆಕ್ಕದಲ್ಲಿ ಏನಾದರೂ ಕಡಿಮೆ ಆಯಿತಾ? ಅಥವಾ ಹೈಕಮಾಂಡ್ ನಾಯಕರನ್ನು ತಾವು ಆಹ್ವಾನ ಮಾಡಲೇ ಇಲ್ಲವಾ? ಎಂದು ಅಶೋಕ್ ಪ್ರಶ್ನಿಸಿದ್ದಾರೆ.

 

- Advertisement - 

 

Share This Article
error: Content is protected !!
";