ಫೆಬ್ರವರಿ-18 ರಂದು ಹರ್ಡೇಕರ್ ಮಂಜಪ್ಪ ಜಯಂತಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಶ್ರೀ ಮುರುಗಿಯ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಲೀಲಾವಿಶ್ರಾಂತಿ ತಾಣದ ಆವರಣದಲ್ಲಿ ಫೆಬ್ರವರಿ ೧೮ರಂದು ಬುಧವಾರ ಬೆಳಗ್ಗೆ ೮.೩೦ ಗಂಟೆಗೆ ಶರಣ ಹರ್ಡೇಕರ್ ಮಂಜಪ್ಪನವರ ಜಯಂತಿ(ಶರಣೋತ್ಸವ)ಯನ್ನು ಹಮ್ಮಿಕೊಳ್ಳಲಾಗಿದೆ.

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ವಿದ್ಯಾಪೀಠದ ಆಡಳಿತ ಮಂಡಳಿಯ ಅಧ್ಯಕ್ಷ ಶಿವಯೋಗಿ. ಸಿ. ಕಳಸದ್ ಅಧ್ಯಕ್ಷತೆ ವಹಿಸಲಿದ್ದು, ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಮಹಾಸ್ವಾಮಿಗಳು ಸಾನಿಧ್ಯ ವಹಿಸುವರು.

- Advertisement - 

ಸದಸ್ಯರುಗಳಾದ ಡಾ.ಪಿ.ಎಸ್.ಶಂಕರ್ ಹಾಗೂ ಚಂದ್ರಶೇಖರ್ ಎಸ್.ಎನ್., ಎಸ್.ಜೆ.ಎಂ. ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ.ಬಿ. ಗುಡಸಿ ಇವರುಗಳು ಉಪಸ್ಥಿತರಿರುವರು. ಚಿತ್ರದುರ್ಗ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಹುರಳಿ ಎಂ. ಬಸವರಾಜ್ ವಿಷಯಾವಲೋಕನ ಮಾಡುವರು.

ಕಾರ್ಯಕ್ರಮವು ಎಸ್.ಜೆ.ಎಂ. ದಂತ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಇವರ ಸಹಯೋಗದಲ್ಲಿ ನಡೆಯಲಿದ್ದು, ಸರ್ವರಿಗೂ ಸ್ವಾಗತವೆಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

- Advertisement - 

 

Share This Article
error: Content is protected !!
";