ಕಾನೂನು ಪದವೀಧರರಿಂದ 2 ಸಾವಿರ ರೂ. ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯ ಅರ್ಹ ನವ ಕಾನೂನು ಪದವೀಧರರಿಗೆ ವಕೀಲರ ವೃತ್ತಿಯಲ್ಲಿ ಉತ್ತೇಜನ ನೀಡುವ ಉದ್ದೇಶದಿಂದ ಪ್ರತಿ ತಿಂಗಳು ರೂ.2,000 ಗಳ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ದಿನಾಂಕ 01.06.2024 ರಿಂದ 31.05.2025 ರ ಅವಧಿಯೊಳಗೆ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಲ್ಲಿ ವಕೀಲರ ವೃತ್ತಿಗೆ ನೋಂದಾಯಿಸಿಕೊAಡಿರಬೇಕು. ಅಭ್ಯರ್ಥಿಯ ಅಥವಾ ಅವರ ಕುಟುಂಬದ ವಾರ್ಷಿಕ ಆದಾಯವು ರೂ.40,000/- ಮೀರಿರಬಾರದು. ಈ ಸಂಬAಧ ದ ಅರ್ಜಿಯೊಂದಿಗೆ ಕಡ್ಡಾಯವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು.

- Advertisement - 

ನೇಮಕಾತಿ ಅಧಿಸೂಚನೆ ಹಾಗೂ ಅರ್ಜಿ ನಮೂನೆ ಜಿಲ್ಲಾ ಹಾಗೂ ತಾಲ್ಲೂಕು ನ್ಯಾಯಾಲಯಗಳು, ವಕೀಲರ ಭವನಗಳಲ್ಲಿ ದೊರಕುತ್ತವೆ. ಭರ್ತಿ ಮಾಡಿದ ಅರ್ಜಿಗಳನ್ನು ದಾಖಲಾತಿಗಳೊಂದಿಗೆ ಮಾರ್ಚ್ 17 ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು.

ಸರ್ಕಾರಿ, ಅರೆ ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡಿ ನಿವೃತ್ತಿ ಹೊಂದಿದವರು ಅಥವಾ ಸೇವೆಯಿಂದ ವಜಾಗೊಂಡವರು ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅರ್ಹರಲ್ಲ. ಈಗಾಗಲೇ ಸರ್ಕಾರದ ಬೇರೆ ಯಾವುದೇ ಯೋಜನೆಯಡಿ ಇಂತಹ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳು ಈ ಯೋಜನೆಗೆ ಅರ್ಹರಾಗಿರುವುದಿಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರೋಣವಾಸುದೇವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - 

 

 

Share This Article
error: Content is protected !!
";