ರಾಹುಲ್ ಗಾಂಧಿಗೆ ಹೈಕೋರ್ಟ್ ರಿಲೀಫ್

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಳೆದ 2023ರ ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧದ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ.

ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ರದ್ದುಪಡಿಸುವ ಮೂಲಕ ರಾಹುಲ್ ಗೆ ಬಿಗ್ ರಿಲೀಫ್ ಸಿಕ್ಕಂತಾಗಿ ರಾಹುಲ್ ಗಾಂಧಿ ನಿರಾಳರಾದಂತಾಗಿದೆ.

- Advertisement - 

ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ್ದ ಕರಪ್ಶನ್ ರೇಟ್ ಕಾರ್ಡ್ಜಾಹೀರಾತನ್ನು ಸಾಮಾಜಿಕ ಜಾಲತಾಣದಲ್ಲಿ ರಾಹುಲ್ ಗಾಂಧಿ ಹಂಚಿಕೊಂಡಿದ್ದರು. ಈ ವಿಚಾರವಾಗಿ ಅವರ ವಿರುದ್ಧ ದೂರು ದಾಖಲಾಗಿತ್ತು. ಬಿಜೆಪಿ ಪರವಾಗಿ ಕೇಶವಪ್ರಸಾದ್ ಎಂಬವರು ಖಾಸಗಿ ದೂರು ಸಲ್ಲಿಸಿದ್ದರು.

ಖಾಸಗಿ ದೂರಿನ ಆಧಾರದ ಮೇಲೆ ರಾಹುಲ್ ಗಾಂಧಿಗೆ ಸಮನ್ಸ್ ನೀಡಲಾಗಿತ್ತು. ಅದನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಪೀಠ, ಪ್ರಕರಣದ ಸ್ವರೂಪ ಮತ್ತು ದಾಖಲೆಗಳನ್ನು ಪರಿಗಣಿಸಿ ಖಾಸಗಿ ದೂರನ್ನು ರದ್ದುಪಡಿಸಿದೆ.

- Advertisement - 

ಏನಿದು ಪ್ರಕರಣ?
2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷದ ಜಾಹೀರಾತುಗಳು ಮತ್ತು ಪ್ರಚಾರ ಘೋಷಣೆಗಳಲ್ಲಿ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಲಾಗಿತ್ತು.
ಕಾಮಗಾರಿಗಳ ನಿರ್ವಹಣೆಗಾಗಿ ಗುತ್ತಿಗೆದಾರರು ಮತ್ತು ಇತರರಿಂದ ಶೇಕಡಾ
40 ರಷ್ಟು ಕಮಿಷನ್/ ಲಂಚವನ್ನು ವಿಧಿಸುತ್ತಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿತ್ತು.

ಜೊತೆಗೆ, ಬಿಜೆಪಿ ಸರ್ಕಾರದ ಕರಪ್ಶನ್ ರೇಟ್ ಕಾರ್ಡ್ಅನ್ನು ಕಾಂಗ್ರೆಸ್ ಬಿಡುಗಡೆ ಮಾಡಿತ್ತು. ಇದನ್ನು ರಾಹುಲ್ ಗಾಂಧಿ ಸಹ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು.

ಇದರ ವಿರುದ್ಧ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ನಾಯಕ ಕೇಶವ ಪ್ರಸಾದ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ಆದರೆ
, ಸರ್ಕಾರದ ವಿರುದ್ಧ ಟೀಕೆ ಮಾಡಲಾಗಿದೆಯೇ ವಿನಃ ನೇರವಾಗಿ ಬಿಜೆಪಿ ವಿರುದ್ಧ ಅಲ್ಲ. ಸರ್ಕಾರದ ವಿರುದ್ಧ ಮಾಡುವ ಟೀಕೆಗಳು ಮಾನನಷ್ಟ ಮೊಕದ್ದಮೆ ಅಡಿ ಬರುವುದಿಲ್ಲ. ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ವಿರುದ್ಧದ ಕ್ರಮಗಳು ಕಾನೂನು ಪ್ರಕ್ರಿಯೆಯ ಸ್ಪಷ್ಟ ದುರುಪಯೋಗವಾಗಿದೆ ಎಂದು ಅವರ ಪರ ವಕೀಲರು ವಾದ ಮಂಡಿಸಿದ್ದರು.

 

Share This Article
error: Content is protected !!
";