ರಸ್ತೆ ದಾಟುತ್ತಿದ್ದ ಯುವತಿಗೆ ಬೈಕ್ ಡಿಕ್ಕಿ, ಉದ್ಯೋಗಿ ಯೋಗೇಶ್ವರಿ ಸಾವು

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವೇಗವಾಗಿ ಬಂದ ಬೈಕ್​​ ರಸ್ತೆ ದಾಟುತ್ತಿದ್ದ ಯುವತಿಗೆ ಡಿಕ್ಕಿಯಾದ ಪರಿಣಾಮ ಯೋಗೇಶ್ವರಿ(26) ಮೃತಪಟ್ಟಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ.

ರಾಜಾಜಿನಗರದ ಖಾಸಗಿ ಬ್ಯಾಂಕ್ ಹೋಮ್ ಲೋನ್ ವಿಭಾಗದಲ್ಲಿ ಉದ್ಯೋಗಿಯಾಗಿದ್ದ ಮೃತ ದುರ್ದೈವಿ ಯೋಗೇಶ್ವರಿ. ಮಧ್ಯಾಹ್ನ ಊಟ ತರಲು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. 

- Advertisement - 

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಬೈಕ್ ಸವಾರನ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಘಟನೆಗೆ ಬಗ್ಗೆ ತನಿಖೆ ನಡೆಯುತ್ತಿದೆ.

 

- Advertisement - 

Share This Article
error: Content is protected !!
";