ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೋಷಮುಕ್ತ ಮತದಾರರ ಪಟ್ಟಿಗಾಗಿ ಚುನಾವಣಾ ಆಯೋಗಕ್ಕೆ ಮನವಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ, ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಮ್ಯಾಪಿಂಗ್ ಪ್ರಕ್ರಿಯೆಯನ್ನು ನ್ಯಾಯಬದ್ಧವಾಗಿ ಮಾಡುವಂತೆ ಇಂದು ರಾಜ್ಯ ಚುನಾವಣಾ ಆಯುಕ್ತರಾದ ಜಿ.ಎಸ್. ಸಂಗ್ರೇಶಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆದು, ಮನೆ-ಮನೆ ಸಮೀಕ್ಷೆಯ ಮೂಲಕ ಪಾರದರ್ಶಕ ಹಾಗೂ ದೋಷಮುಕ್ತ ಪಟ್ಟಿಯನ್ನು ಸಿದ್ಧಪಡಿಸುವುದು ಆಯೋಗದ ಆದ್ಯತೆಯಾಗಲಿ ಎಂದು ಒತ್ತಾಯಿಸಲಾಯಿತು.
ಈ ವೇಳೆ ಸಚಿವರಾದ ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್, ಶಾಸಕರಾದ ರಿಜ್ವಾನ್ ಅರ್ಷದ್, ಎ.ಸಿ. ಶ್ರೀನಿವಾಸ್, ಎಂಎಲ್‌ಸಿಗಳಾದ ಪುಟ್ಟಣ್ಣ, ಶ್ರೀನಿವಾಸ್ ಮತ್ತಿತರರು ನಿಯೋಗದಲ್ಲಿದ್ದರು.

