ಭದ್ರಾ ಯೋಜನೆಗೆ ರಾಜ್ಯ-ಕೇಂದ್ರಗಳು ಅನುದಾನ ಒದಗಿಸಲಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಕಸಾಪ ವತಿಯಿಂದ ನಗರದಲ್ಲಿ ಆಯೋಜನೆ ಮಾಡಲಾಗಿದ್ದ ಎರಡು ದಿನಗಳ 18ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಮುಖ ಐದು ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಪಠಿಸಿದರು.

ಪ್ರಮುಖ ನಿರ್ಣಯಗಳು-
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಮಂಜೂರು ಮಾಡಿ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿ ನೀರು ಹರಿಸಬೇಕು.

- Advertisement - 

ಜಿಲ್ಲಾ ಕನ್ನಡ ಭವನ ನಿರ್ಮಾಣ ಮಾಡಲು ಜಿಲ್ಲಾ ಸಚಿವರು 2 ಕೋಟಿ ಅನುದಾನ ಒದಗಿಸುವ ಭರವಸೆ ನೀಡಿದ್ದು ತಕ್ಷಣ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಜೊತೆಗೆ ಸಚಿವರನ್ನು ಅಭಿನಂದಿಸಲಾಗುತ್ತದೆ.

ನಾಮಫಲಕಗಳ ನಿಯಮಾವಳಿಯಂತೆ ಚಿತ್ರದುರ್ಗ ನಗರದಲ್ಲಿ 60:40 ಅನುಪಾತದಡಿ ಅನುಷ್ಠಾನಕ್ಕೆ ನಗರಸಭೆ ಕ್ರಮ ವಹಿಸಬೇಕು. ಕನ್ನಡ ಮಾಧ್ಯಮ ಶಾಲೆಗಳಿಗೆ ಕಟ್ಟಡ ಸೇರಿದಂತೆ ಮೂಲಭೂತ ಸೌಲಭ್ಯ ಒದಗಿಸಬೇಕು.

- Advertisement - 

ರಾಜ್ಯ ಮತ್ತು ಕೇಂದ್ರದಲ್ಲಿ ಬ್ಯಾಂಕ್, ರೈಲ್ವೇ ಸೇರಿದಂತೆ ಇತರೆ ಉದ್ಯೋಗದಲ್ಲಿ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎನ್ನುವ ಐದು ನಿರ್ಣಯಗಳನ್ನು ಸಮ್ಮೇಳನದಲ್ಲಿ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ತಾಲ್ಲೂಕು ಕಸಾಪ ಅಧ್ಯಕ್ಷ ವಿ.ಎಲ್.ಪ್ರಶಾಂತ್, ಕಾರ್ಯದರ್ಶಿ ವಿ.ಶ್ರೀನಿವಾಸ ಮಳಲಿ, ಕೆ.ಜಿ.ಅಜಯ್ ಕುಮಾರ್, ಸಿ.ಲೋಕೇಶ್ ಇದ್ದರು.

 

 

 

Share This Article
error: Content is protected !!
";