ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ‘ಬೆಂಗಳೂರು ಚಲೋ’ ಪ್ರತಿಭಟನೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ವಿಭಾಗಗಳ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆಬ್ರವರಿ-19 ರಂದು ಬೆಂಗಳೂರು ಚಲೋಕೈಗೊಂಡಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.

ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿ 4 ನಿಗಮದ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ಫೆ.19ರಂದು ಗುರುವಾರ ಸಂಜೆ ಬಳಿಕ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ. ಮತ್ತೊಂದೆಡೆ ಸಾರಿಗೆ ಇಲಾಖೆ ಸಹ ರಜೆ ಹಾಗೂ ನೋ ವರ್ಕ್ ನೋ ಪೇ ಸುತ್ತೋಲೆ ಹೊರಡಿಸಿದೆ.
ಮುಷ್ಕರ, ಬಸ್ ಸಂಚಾರ ಇರುತ್ತಾ
?

- Advertisement - 

ಫೆಬ್ರವರಿ 19, 2026 ರಿಂದ ಸಾರಿಗೆ ನೌಕರರು ವೇತನ ಹೆಚ್ಚಳ ಮತ್ತು ಬಾಕಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಚಲೋ ಪ್ರತಿಭಟನೆಗೆ ಕರೆ ನೀಡಿದ್ದು, ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳ ಸಂಚಾರದಲ್ಲಿ ಭಾರಿ ವ್ಯತ್ಯಯವಾಗುವ ಸಾಧ್ಯತೆಯಿದೆ.

ನೌಕರರು ಕರ್ತವ್ಯಕ್ಕೆ ಗೈರುಹಾಜರಾದರೆ ನೋ ವರ್ಕ್ ನೋ ಪೇಜಾರಿ ಮಾಡುವುದಾಗಿ ಆಡಳಿತ ಮಂಡಳಿ ಎಚ್ಚರಿಕೆ ನೀಡಿದೆ. ಇದರಿಂದ ಪ್ರಯಾಣಿಕರು ತೊಂದರೆ ಅನುಭವಿಸಬೇಕಾಗಬಹುದಾಗಿದೆ.

- Advertisement - 

Share This Article
error: Content is protected !!
";