ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷೆ ಜಯಮಾಲಾ ಅವರು ಹಾಗೂ ಮಂಡಳಿ ಸದಸ್ಯರು ಬುಧವಾರ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಈ ವೇಳೆ ಕನ್ನಡ ಚಿತ್ರರಂಗವನ್ನು ಎತ್ತರಕ್ಕೆ ಕೊಂಡೊಯ್ಯುವಂತೆ ಜಯಮಾಲಾ ಅವರಿಗೆ ಡಿಸಿಎಂ ಅವರು ಶುಭಹಾರೈಸಿದರು.

