ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದು ದೇಶಾದ್ಯಂತ ‘ಅಭಿವ್ಯಕ್ತಿ ಸ್ವಾತಂತ್ರ್ಯ‘ದ ಭಾಷಣ ಮಾಡುವ ರಾಹುಲ್ ಗಾಂಧಿ ಅವರೇ, ಒಮ್ಮೆ ನಿಮ್ಮದೇ ಪಕ್ಷದ ಆಡಳಿತವಿರುವ ಕರ್ನಾಟಕದತ್ತ ನೋಡಿ! ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಾಕೀತು ಮಾಡಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿರುವುದು ಯಾವ ‘ಸಂವಿಧಾನ‘ದ ನಿಯಮ ರಾಹುಲ್ ಗಾಂಧಿ ಅವರೇ? ಮೊದಲು ಕರ್ನಾಟಕ ಸರ್ಕಾರಕ್ಕೆ ಸಂವಿಧಾನದ ಪಾಠ ಮಾಡಿ ಎಂದು ನಿಖಿಲ್ ಆಗ್ರಹ ಮಾಡಿದ್ದಾರೆ.
ಮಾಧ್ಯಮಗಳನ್ನು ಪಂಜರದಲ್ಲಿ ಇಡಲು ಹೊರಟಿರುವ ಈ ಕರಾಳ ಸುತ್ತೋಲೆ ಅಪ್ಪಟ “ತುರ್ತು ಪರಿಸ್ಥಿತಿ”ಯ ಮುಂದುವರಿದ ಭಾಗ ಎಂದು ನಿಖಿಲ್ ಅಭಿಪ್ರಾಯಪಟ್ಟಿದ್ದಾರೆ.

