ನೇಣು ಬಿಗಿದ ಸ್ಥಿತಿಯಲ್ಲಿ ಅಸ್ತಿ ಪಂಜರ ಪತ್ತೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಕಂಪೌಂಡ್ ಒಳಗೆ ಅಪರಿಚಿತ ಶವ ಪತ್ತೆಯಾಗಿದ್ದು
, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸುಮಾರು 8 ಎಕರೆ ವ್ಯಾಪ್ತಿಯ ಖಾಸಗಿ ಕಂಪನಿಯ ಆವರಣದಲ್ಲಿ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಅಸ್ಥಿಪಂಜರ ಪತ್ತೆಯಾಗಿದೆ.

ಐದಾರು ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದ್ದು ಫ್ಯಾಕ್ಟರಿಯು 8 ಎಕರೆ ವಿಶಾಲವಾದ ಅವರಣವನ್ನ ಹೊಂದಿದ್ದು, ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬರದ ಕಾರಣ  ಶವ ಸಂಪೂರ್ಣ ಕೊಳೆತು ಅಸ್ತಿಪಂಜರವಾಗಿದೆ, ತಲೆಯ ಭಾಗ ಮಾತ್ರ ಮರದಲ್ಲಿ ನೇತಾಡುತ್ತಿದ್ದು ಕೆಳಗೆ ದೇಹದ ಇತರ ಭಾಗದ ಮೂಳೆಗಳು ಬಿದ್ದಿವೆ.

- Advertisement - 

ಈ ಬಾಗದಲ್ಲಿ  ದಟ್ಟ ಪೊದೆಗಳಿದ್ದ ಕಾರಣ ಈ ಘಟನೆ ಇಷ್ಟು ದಿನ ಬೆಳಕಿಗೆ ಬಂದಿರಲಿಲ್ಲ ಎಂದು ತಿಳಿದುಬಂದಿದೆ. ಸುಮಾರು ಐದರಿಂದ ಆರು ತಿಂಗಳ ಹಿಂದೆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ.

ಮಾಹಿತಿ ತಿಳಿದ ತಕ್ಷಣ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವದ ಅವಶೇಷಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದು, ಪ್ರಕರಣ  ದಾಖಲಿಸಿ ಕೊಂಡು  ತನಿಖೆ ಮುಂದುವರಿಸಿದ್ದಾರೆ.

- Advertisement - 

 

Share This Article
error: Content is protected !!
";