ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಿತು.

ಸಭೆಯಲ್ಲಿ ಮುಂಬರುವ ಜಿಬಿಎ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ನಿಟ್ಟಿನಲ್ಲಿ ಪಕ್ಷ ಸಂಘಟನೆ ಹಾಗೂ ಕಾರ್ಯತಂತ್ರಗಳ ಕುರಿತಂತೆ ಸಮಾಲೋಚನೆ ನಡೆಸಲಾಯಿತು.

- Advertisement - 

ರಾಜ್ಯದಲ್ಲಿರುವ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದ್ದು, ಮುಂದಿನ ದಿನಗಳಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಂದೋಲನ ಕಟ್ಟುವ ನಿಟ್ಟಿನಲ್ಲಿ ವಿಸ್ತೃತವಾಗಿ ಚರ್ಚಿಸಿ ಸಂಕಲ್ಪ ಮಾಡಲಾಯಿತು.

ಸಭೆಯಲ್ಲಿ ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿ, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಉಸ್ತುವಾರಿ ಅಗರ್ ವಾಲ್,  ಸಹ-ಉಸ್ತುವಾರಿ ಸುಧಾಕರ್ ರೆಡ್ಡಿ, ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ,

- Advertisement - 

ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ, ಸಂಸದರಾದ ಜಗದೀಶ್ ಶೆಟ್ಟರ್, ಕೇಂದ್ರ ಸರ್ಕಾರದ ರಾಜ್ಯ ಸಚಿವರುಗಳಾದ ಕು.ಶೋಭಾ ಕರಂದ್ಲಾಜೆ, ವಿ.ಸೋಮಣ್ಣ, ಮಾಜಿ ಸಚಿವ ಬಿ.ಶ್ರೀರಾಮುಲು, ಸೇರಿದಂತೆ ಪಕ್ಷದ ಎಲ್ಲ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

 

Share This Article
error: Content is protected !!
";