ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಛತ್ರಪತಿ ಶಿವಾಜಿ ಮಹಾರಾಜರ 399ನೇ ಜಯಂತಿ ಅಂಗವಾಗಿ ಬೆಂಗಳೂರಿನ ಸದಾಶಿವನಗರದ ಬಳಿ ಇರುವ ಶಿವಾಜಿ ಮಹಾರಾಜರ ಪ್ರತಿಮೆಗೆ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪುಷ್ಪಮಾಲೆ ಅರ್ಪಿಸಿ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಗೋಸಾಯಿ ಮಠದ ವೇದಾಂತ ಆಚಾರ್ಯ ಶ್ರೀಮಂಜುನಾಥ ಭಾರತಿ ಸ್ವಾಮೀಜಿ, ಶಾಸಕ ಡಾ.ಅಶ್ವಥ್ ನಾರಾಯಣ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

