ಔಷಧ ಆಡಳಿತ ವೃಂದಗಳ ನೇಮಕಾತಿ ಆದೇಶ ವಿತರಿಸಿದ ಸಿಎಂ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ “ಅಭಯ ಹಸ್ತ” ಕಾರ್ಯಕ್ರಮ ಉದ್ಘಾಟಿಸಿ, ಆರೋಗ್ಯ ಮತ್ತು ಕುಟುಂಬ‌ಕಲ್ಯಾಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ವೃಂದಗಳ ನೇಮಕಾತಿ ಆದೇಶಗಳನ್ನು ವಿತರಿಸಿದರು.

ನಮ್ಮ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೆ ಬಂದ ನಂತರ ನೇಮಕಾತಿಯಲ್ಲಿದ್ದ ಹಲವು ಸಮಸ್ಯೆಗಳನ್ನು ಬಗೆಹರಿಸಿ, ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುತ್ತಿದೆ.

- Advertisement - 

ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಶಿಕ್ಷಣ, ಆರೋಗ್ಯ, ಪೊಲೀಸ್ ವ್ಯವಸ್ಥೆ ಅತಿ ಮಹತ್ವದ್ದಾಗಿದ್ದು, ಇಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಆದ್ಯತೆ ನೀಡುತ್ತಿದೆ. 2.5 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿದ್ದು, ಇವುಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು.

ಆರೋಗ್ಯ ಮತ್ತು ಕುಟುಂಬ‌ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿದಂತೆ ಅನೇಕ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

- Advertisement - 

Share This Article
error: Content is protected !!
";