ಕರಾವಳಿಯ ಅಭಿವೃದ್ಧಿಗೆ ಹೊಸ ಸೇತುವೆ ಆರಂಭ!

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಸ್ಕೋಡ ಗ್ರಾಮದ ಬಳಿ
, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಉದ್ಘಾಟಿಸಿದರು.

ಅಂಕೋಲಾ ತಾಲೂಕಿನ ಮಂಜಗುಣಿ ಗ್ರಾಮದಿಂದ ಕುಮಟಾ ತಾಲೂಕಿನ ಗಂಗಾವಳಿ ಗ್ರಾಮಗಳವರೆಗೆ ನೇರ ಸಂಪರ್ಕ ಕಲ್ಪಿಸುವ ಈ ಸೇತುವೆ, ಕರಾವಳಿ ಭಾಗದ ಜನರ ದಶಕಗಳ ಕನಸಾಗಿತ್ತು. ಮಳೆಗಾಲದಲ್ಲಿ ನದಿ ತುಂಬಿ ಹರಿಯುವ ಸಂದರ್ಭದಲ್ಲಿ ಜನರು ಎದುರಿಸುತ್ತಿದ್ದ ಸಂಚಾರದ ತೊಂದರೆಗಳಿಗೆ ಈಗ ಶಾಶ್ವತ ಪರಿಹಾರ ದೊರೆತಿದೆ ಎಂದು ಡಿಸಿಎಂ ತಿಳಿಸಿದರು.

- Advertisement - 

ಈ ಸೇತುವೆ ನಿರ್ಮಾಣದಿಂದ ಸ್ಥಳೀಯ ರೈತರು, ಮೀನುಗಾರರು, ವಿದ್ಯಾರ್ಥಿಗಳು ಹಾಗೂ ವ್ಯಾಪಾರಸ್ಥರಿಗೆ ಬಹಳ ಅನುಕೂಲವಾಗಲಿದೆ. ಕೃಷಿ ಉತ್ಪನ್ನಗಳು ಮತ್ತು ಮೀನುಗಾರಿಕಾ ವಸ್ತುಗಳ ಸಾಗಣೆ ವೇಗವಾಗಿ ನಡೆಯಲಿದ್ದು, ಗ್ರಾಮೀಣ ಆರ್ಥಿಕತೆಗೆ ಹೊಸ ಚೈತನ್ಯ ದೊರೆಯಲಿದೆ ಎಂದು ಶಿವಕುಮಾರ್ ಅಭಿಪ್ರಾಯಪಟ್ಟರು.

 

- Advertisement - 

Share This Article
error: Content is protected !!
";